
ಮುಂಬೈ (ಡಿ.5): ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್ ತಾರೆಯರು ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಇವರೊಂದಿಗೆ ಎನ್‌ಡಿಎ ಆಡಳಿತದಲ್ಲಿರುವ ಒಂಬತ್ತು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಅಡಿಕೆಯಿಂದ ಆರೋಗ್ಯಕ್ಕೆ ಹಾನಿ?: ಸತ್ಯಾನ್ವೇಷಣೆ ಅಧ್ಯಯನಕ್ಕೆ ಇಳಿದ ಕೇಂದ್ರ ಸರ್ಕಾರ
ನಾಗ್ಪುರ ದಕ್ಷಿಣ ಪಶ್ಚಿಮ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆದ್ದಿರುವ 54 ವರ್ಷದ ಫಡ್ನವಿಸ್ ಅವರು ಮೂರನೇ ಬಾರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ. ಭರ್ಜರಿ ಬಹುಮತದೊಂದಿಗೆ ಗೆದ್ದಿದ್ದರೂ, ಏಕನಾಥ್ ಶಿಂಧೆ ಬಂಡಾಯವೇಳುವ ಸೂಚನೆ ನೀಡಿದ್ದರಿಂದ ಪ್ರಮಾಣವಚನ ವಿಳಂಬವಾಯಿತು. 10 ಸಚಿವ ಸ್ಥಾನಗಳು, ವಿಧಾನಸಭಾ ಸ್ಪೀಕರ್ ಮತ್ತು ಕೌನ್ಸಿಲ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ ನಂತರ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡರು. ಗೃಹ ಇಲಾಖೆ ಸಿಗದಿರುವುದು ಮಾತ್ರ ಶಿಂಧೆ ಬಣಕ್ಕೆ ಹಿನ್ನಡೆಯಾಗಿದೆ.
Breaking: ಕೃತಕ ಸೂರ್ಯಗ್ರಹಣ ಸೃಷ್ಟಿಗೆ ಸಾಹಸ, ಪ್ರೋಬಾ-3 ನೌಕೆಯನ್ನ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ