
ಆಯೋಧ್ಯೆ(ನ.18) ಶ್ರೀರಾಮ ಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಭವ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಜನವರಿ 18 ರಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದೆ. ಇದೀಗ ಅಂತಿಮ ಹಂತದ ಕಾಮಗಾರಿಗಳು ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ನಿರ್ಮಾಣ ಹಂತದಲ್ಲಿ ದೀಪಾವಳಿ ಹಬ್ಬವನ್ನೂ ಆಚರಿಸಲಾಗಿದೆ. ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಂಡರೆ, ಸಾರ್ವಜನಿಕ ದರ್ಶನಕ್ಕೆ ಮುಕ್ತವಾಗುವುದು ಯಾವಾಗ? ಅನ್ನೋ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾಗಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ದಿನಾಂಕ ಘೋಷಿಸಿದ್ದಾರೆ. ಜನವರಿ 23 ರಿಂದಲೇ ರಾಮ ಮಂದಿರ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ ಎಂದಿದ್ದಾರೆ.
ಜನವರಿ 22 ರಂದು ಅಭಿಜಿನ್ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ಪ್ರಧಾನಿ ಮೋದಿ ಶ್ರೀ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಮೋದಿ ರಾಮ ಮಂದಿರ ಲೋಕಾರ್ಪಣೆಗೊಳಿಸಿದ ಮರುದಿನದಿಂದಲೇ ಸಾರ್ವಜನಿಕ ದರ್ಶನಕ್ಕೆ ಮುಕ್ತವಾಗಲಿದೆ ಎಂದುು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಹಿಂದೂಗಳು ಮುಸ್ಲಿಂ ಆಗಿ ಹೊರಬರ್ತಾರೆ: Javed Miandad
ಜನವರಿ 22ರಂದು ಮೋದಿ ಸೇರಿದಂತೆ ಹಲವು ಗಣ್ಯರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಭಾರಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಹೀಗಾಗಿ ಜನವರಿ 22 ರಂದು ಸಾರ್ವಜನಿಕ ಪ್ರವೇಶಕ್ಕೆ ಅನಾನುಕೂಲಗಳಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜನವರಿ 23ರಿಂದ ಸಾರ್ವಜನಿಕರು ಶ್ರೀ ರಾಮನ ದರ್ಶನವನ್ನು ಮಾಡಬಹುದು ಎಂದು ಸ್ವಾಮೀಜಿ ಹೇಳಿದ್ದಾರೆ.
ಜನವರಿ 22ರಿಂದ ಮಾರ್ಚ್ 10ರ ವರೆಗೆ ರಾಮ ಮಂದಿರದ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರವಾಗಲಿದೆ. ಹೀಗಾಗಿ ಭಕ್ತರು ನೇರ ಪ್ರಸಾರದ ಮೂಲಕ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ, ಪೂಜಾ ಕೈಂಕರ್ಯ ವೀಕ್ಷಿಸಬಹುದು. ಇದೇ ವೇಳೆ ಐದು ದೀಪಗಳನ್ನು ಪ್ರತಿ ಮನೆಯಲ್ಲಿ ಬೆಳಗುವ ಮೂಲಕ ಐದು ಶತಮಾನದ ಸಂಕೇತವಾಗಿ ದೀಪೋತ್ಸವ ಆಚರಿಸಬೇಕು ಎಂದು ಪೇಜಾವರಶ್ರೀ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ 10 ಕೋಟಿ ಹಿಂದೂ ಕುಟುಂಬಕ್ಕೆ ಆಹ್ವಾನ: ವಿಹೆಚ್‌ಪಿ
ಈಗಾಗಲೇ ಗಣ್ಯರು, ರಾಮ ಮಂದಿರದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡವರಿಗೆ, ಕುಟುಂಬದವರಿಗೆ ಆಹ್ವಾನ ನೀಡಲಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಇಡೀ ದೇಶವೇ ಸಂಭ್ರಮದಿಂದ ಶ್ರೀ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದೆ. ಪ್ರತಿ ಮನೆ, ದೇವಸ್ಥಾನಗಳಲ್ಲೂ ರಾಮ ಮಂದಿರ ಉದ್ಘಾಟನೆ ಪೂಜೆ, ಹಬ್ಬ ಮನೆ ಮಾಡಲಿದೆ ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ