ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಮತ್ತೆ ವಿಸ್ತರಣೆ!

By Suvarna NewsFirst Published Jun 30, 2021, 2:31 PM IST
Highlights

* ದೇಶದಲ್ಲಿ ಕೊರೋನಾ ಮೂರನೇ ಅಲೆ ಭೀತಿ

* ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನ ಸಂಚಾರವನ್ನು ಜುಲೈ 31ರವರೆಗೆ ವಿಸ್ತರಿಸಲು ನಿರ್ಧಾರ

* ಈ ಹಿಂದೆ ವಿಧಿಸಿದ್ದ ನಿರ್ಬಂಧ ಜೂನ್ 30ರಂದು ಕೊನೆಗೊಳ್ಳಬೇಕಿತ್ತು

ನವದೆಹಲಿ(ಜೂ.30): ಕೊರೋನಾ, ಡೆಲ್ಟಾ ಪ್ಲಸ್ ಹೀಗೆ ಸೋಂಕು ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಹೀಗಿರುವಾಗ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನ ಸಂಚಾರವನ್ನು ಜುಲೈ 31ರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬುಧವಾರ ಪ್ರಕಟಣೆ

ಈ ಹಿಂದೆ ವಿಧಿಸಿದ್ದ ನಿರ್ಬಂಧ ಜೂನ್ 30ರಂದು ಕೊನೆಗೊಳ್ಳಬೇಕಿತ್ತು. ಆದರೀಗ ಕೊರೋಬಾ ಮೂರನೇ ಅಲೆ ಎದುರಾಗುವ ಹಿನ್ನೆಲೆ ಈ ಗಡುವನ್ನು ಮತ್ತೆ ವಿಸ್ತರಿಸಲಾಗಿದೆ.  ಸರಕು ಸಾಗಾಟ ವಿಮಾನ ಮತ್ತು ಆಯ್ದ ದೇಶಗಳ ಜತೆಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಹಾರಾಟ ನಡೆಸುವ ವಿಮಾನಗಳು ಎಂದಿನಂತೆ ಮುಂದುವರಿಯಲಿದೆ ಎಂದು ಡಿಜಿಸಿಎ ತಿಳಿಸಿದೆ.

ಕೊರೋನಾ ಪ್ರಕರಣಗಳ ಆಧಾರದಲ್ಲಿ ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಬಹುದಾಗಿದೆ ಎಂದೂ ಈ ಪ್ರಕಟನೆಯಲ್ಲಿ ಉಲ್ಲೇಖಿಸಲಾಗಿದೆ. ದೇಶದಲ್ಲಿ ಕೊರೋನಾ ಹಾವಳಿ ಎದುರಾದ ಬಳಿಕ, 2020ರ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

click me!