
ಕಾರವಾರ, ಉತ್ತರಕನ್ನಡ (ಆ.9): ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ಘನತೆಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಪಾರದರ್ಶಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದೆಹಲಿಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ ಸಂಸದರು, ಮೊದಲು 13 ಸ್ಥಳಗಳ ಬಗ್ಗೆ ಹೇಳಿದ್ದ ಅನಾಮಿಕ ವ್ಯಕ್ತಿ ಈಗ 18 ಸ್ಥಳಗಳ ಬಗ್ಗೆ ಹೇಳುತ್ತಿದ್ದಾನೆ. ಯಾವುದೇ ಮಾಹಿತಿಯಿಲ್ಲದ ವ್ಯಕ್ತಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿ ಯಾರು? ಅವನ ಹಿನ್ನೆಲೆ ಏನು? ಅವನ ಹಿಂದಿರುವವರು ಯಾರು? ಎಲ್ಲಾ ಮಾಹಿತಿಯನ್ನು ಸರ್ಕಾರ, ಎಸ್‌ಐಟಿ ಬಹಿರಂಗಪಡಿಸುವಂತೆ ಆಗ್ರಹಿಸಿದರು.
ಎಸ್‌ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿಯನ್ನು ಬಳಸಿಕೊಳ್ತಿದೆ. ಎಸ್‌ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂಬ ಅನುಮಾನವೂ ವ್ಯಕ್ತಪಡಿಸಿದ ಕಾಗೇರಿಯವರು, ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯ ಎಡಪಂಥೀಯ ವಿಚಾರಧಾರೆಯವರ ನಿದ್ದೆಗೆಡಿಸಿವೆ. ಇದರಿಂದಲೇ ಅವರು ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದೂಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಈ ಷಡ್ಯಂತ್ರ ಖಂಡಿಸಬೇಕು ಎಂದು ಕಾಗೇರಿ ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ