'ಜಂತರ್ ಮಂತರ್ ಪ್ರತಿಭಟನೆಗೂ ಮುನ್ನವೇ ಧ್ರುವ್ ರಾಠಿ ಬಂಧನ' 50 ಪೊಲೀಸರೊಂದಿಗೆ ಗುರುಗ್ರಾಮ ನಿವಾಸಕ್ಕೆ ದಾಳಿ ಇಟ್ಟ ದೆಹಲಿ ಪೊಲೀಸ್

Published : Oct 10, 2026, 10:42 AM IST
Dhruv Rathee

ಸಾರಾಂಶ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿದ್ದ ಸಿಜೆಪಿ ಪ್ರತಿಭಟನೆಗೂ ಮುನ್ನವೇ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು 400ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದು, ದೆಹಲಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನವದೆಹಲಿ / ಗುರುಗ್ರಾಮ (ಅ.10): ಕಾಕ್ರೋಚ್‌ ಜನತಾ ಪಾರ್ಟಿ (CJP) ಘೋಷಣೆ ಮಾಡಿದ್ದ ನವದೆಹಲಿಯ ಜಂತರ್ ಮಂತರ್ ಬೃಹತ್ ಪ್ರತಿಭಟನಾ ಸಮಾವೇಶಕ್ಕೂ ಮುನ್ನವೇ, ಪ್ರಸಿದ್ಧ ಯೂಟ್ಯೂಬರ್ ಹಾಗೂ ಮೋದಿ ಸರ್ಕಾರದ ಪ್ರಖರ ಟೀಕೆಕಾರ ಧ್ರುವ್ ರಾಠಿ (Dhruv Rathee) ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ. ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ಅವರ ನಿವಾಸದಿಂದ ರಾಠಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

ಪ್ರತಿಭಟನೆಯಲ್ಲಿ ಭಾಗವಹಿಸಲು ಧ್ರುವ್ ರಾಠಿ ನವದೆಹಲಿಗೆ ಆಗಮಿಸಿದ್ದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲಾಗಿತ್ತು. ಶನಿವಾರ ಬೆಳಿಗ್ಗೆ ಸುಮಾರು 50 ದೆಹಲಿ ಪೊಲೀಸ್ ಸಿಬ್ಬಂದಿಯ ಪಡೆ ಗುರುಗ್ರಾಮದಲ್ಲಿದ್ದ ರಾಠಿ ಅವರ ಮನೆಗೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಸಿಜೆಪಿ ತೀವ್ರ ಆಕ್ರೋಶ, ತಕ್ಷಣ ಬಿಡುಗಡೆಗೆ ಆಗ್ರಹ

ಧ್ರುವ್ ರಾಠಿ ಅವರ ಈ ಹಠಾತ್ ಬಂಧನಕ್ಕೆ ಸಿಜೆಪಿ (CJP) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, "ಧ್ರುವ್ ರಾಠಿ ಅವರನ್ನು ಯಾವುದೇ ಷರತ್ತಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು" ಎಂದು ಆಗ್ರಹಿಸಿದೆ.

ಶುಕ್ರವಾರ ಸಂಜೆಯಷ್ಟೇ ತಮ್ಮ ಅಧಿಕೃತ 'ಎಕ್ಸ್' (X) ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಧ್ರುವ್ ರಾಠಿ, ಶನಿವಾರ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳುತ್ತಿರುವುದಾಗಿ ಪ್ರಕಟಿಸಿದ್ದರು. ಜರ್ಮನಿಯಲ್ಲಿದ್ದ ರಾಠಿ, ಇದೇ ವಾರದ ಆರಂಭದಲ್ಲಿ ಭಾರತಕ್ಕೆ ಆಗಮಿಸಿದ್ದು, ಅಕ್ಟೋಬರ್ 8 ರಂದು ಬೆಂಗಳೂರಿನಲ್ಲಿ ನಡೆದ ಸಿಜೆಪಿ ಪ್ರತಿಭಟನಾ ಸಭೆಯಲ್ಲೂ ಸಕ್ರಿಯವಾಗಿ ಭಾಗವಹಿಸಿದ್ದರು. ಧ್ರುವ್ ರಾಠಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಫಾಲೋವರ್ಸ್‌ ಹೊಂದಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 1.92 ಕೋಟಿ, ಎಕ್ಸ್‌ನಲ್ಲಿ 33 ಲಕ್ಷ ಹಾಗೂ ಯೂಟ್ಯೂಬ್‌ನಲ್ಲಿ ಬರೋಬ್ಬರಿ 3.3 ಕೋಟಿ (33 Million) ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದಾರೆ.

ದೆಹಲಿಯಲ್ಲಿ ಭಾರಿ ಹೈ ಅಲರ್ಟ್: 400ಕ್ಕೂ ಹೆಚ್ಚು ಮಂದಿ ವಶಕ್ಕೆ!

ಸುರಕ್ಷತೆ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ನೆಪವೊಡ್ಡಿ ದೆಹಲಿ ಪೊಲೀಸರು ಈ ಪ್ರತಿಭಟನೆಗೆ ಈ ಹಿಂದೆಯೇ ಅನುಮತಿಯನ್ನು ನಿರಾಕರಿಸಿದ್ದರು. ಪ್ರತಿಭಟನಾಕಾರರು ಜಂತರ್ ಮಂತರ್ ತಲುಪುವುದನ್ನು ತಡೆಯಲು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.

ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ (Chief Election Commissioner Gyanesh Kumar) ಅವರ ವಿರುದ್ಧ ದೆಹಲಿಯ ಹೃದಯಭಾಗದಲ್ಲಿ ಈ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ತಡೆಯಲು ಶುಕ್ರವಾರ ರಾತ್ರೋರಾತ್ರಿ 400ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನೂರಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ ಹತ್ತಾರು ಮೆಟ್ರೋ ನಿಲ್ದಾಣಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.

ಜಂತರ್ ಮಂತರ್ ತಲುಪಲು ಸಿಜೆಪಿ ತನ್ನ ಬೆಂಬಲಿಗರಿಗೆ ಕರೆ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರವು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (CAPF) 20,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Hope Island: ನಾಲ್ಕೂ ಕಡೆ ನೀರು, ಆದರೂ ಕುಡಿಯುವ ನೀರಿನ ಸಮಸ್ಯೆ! ನಮ್ಮ ಪಕ್ಕದಲ್ಲೇ ಇರುವ 118 ಕುಟುಂಬಗಳ ಬದುಕು ಹೇಗಿದೆ ಗೊತ್ತಾ?
​'ಯಾವ ದೇಶವೂ ಪರಿಪೂರ್ಣವಲ್ಲ!' - ಭಾರತವನ್ನು ಹೀಯಾಳಿಸಿದವರಿಗೆ ಜಪಾನ್‌ ಮಹಿಳೆಯ ಖಡಕ್ ಉತ್ತರವಿದು!