
ನವದೆಹಲಿ (ಏ.24) ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ಚುನಾವಣೆ ಕುರಿತು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ನಾನು ಮಾಧ್ಯಮಗಳ ಮುಂದೆ ಮಾತಾಡುವುದಿಲ್ಲ ಎಂದ ಅವರು, ಅಲ್ಪಸಂಖ್ಯಾತ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಮ್ಮ ಕಡೆಯಿಂದ ತಪ್ಪಾಗಿಬಹುದು. ಕೆಲವು ಬಾರಿ ಅವರ ಕಡೆಯಿಂದ ತಪ್ಪಾಗಿರಬಹುದು ಎಂದು ತಿಳಿಸಿದರು.
ಇನ್ನು ಅಮಾನತು ವಾಪಸ್ ಪಡೆಯುವ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ, ಇದು ಅಮಾನತು ಅಲ್ಲ. ಬದಲಿಗೆ ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಒಮ್ಮೆ ರಾಜೀನಾಮೆ ಪತ್ರ ವಿಶ್ಲೇಷಣೆ ಮಾಡಿ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ