ದಿಶಾ ಸಾಲಿಯಾನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಶಾ ತಂದೆ ದೂರು ನೀಡಿದ್ದಾರೆ. ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಸತೀಶ್ ಆರೋಪಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದಾರೆ.
ಮುಂಬೈ: 2020ರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಶಾಸಕ ಆದಿತ್ಯ ಠಾಕ್ರೆ ಹಾಗೂ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಶಾ ಸಾಲಿಯಾನ್ ತಂದೆ ಸತೀಶ ಸಾಲಿಯಾನ್ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ಸತೀಶ್, ‘ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಕೆಲವು ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲು ರಾಜಕೀಯವಾಗಿ ಯತ್ನ ನಡೆಯುತ್ತಿದೆ. ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯು ಏಪ್ರಿಲ್ ಮೊದಲ ವಾರದಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಈ ಬೆನ್ನಲ್ಲೇ ಜಂಟಿ ಪೊಲೀಸ್ ಅಯುಕ್ತರಿಗೆ( ಅಪರಾಧ)ಲಿಖಿತ ದೂರು ನೀಡಿದ್ದಾರೆ.
ಮುಂಬೈನಲ್ಲಿ ಸದ್ದು ಮಾಡ್ತಿದೆ ಕನ್ನಡತಿ ದಿಶಾ ಸಾಲಿಯಾನ್ ಸಾವಿನ ಕೇಸ್! ಆದಿತ್ಯ ಠಾಕ್ರೆ ಪಾತ್ರ ಏನು?
ಛತ್ತೀಸ್‌ಗಢ: ಎನ್‌ಕೌಂಟರ್‌ಗೆ 25 ಲಕ್ಷ ರು. ಇನಾಂ ಇದ್ದ 3 ನಕ್ಸಲರ ಹತ್ಯೆ
ದಾಂತೇವಾಡ( ಛತ್ತೀಸ್‌ಗಢ): ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ತಲೆಗೆ 25 ಲಕ್ಷ ರು. ಇನಾಮು ಹೊಂದಿದ್ದ ನಕ್ಸಲ್ ಸೇರಿ ಮೂವರನ್ನು ಭದ್ರತಾ ಸಿಬ್ಬಂದಿ ಮಂಗಳವಾರ ಹೊಡೆದುರುಳಿಸಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲರ ಸಂಖ್ಯೆ 116ಕ್ಕ ಏರಿಕೆಯಾಗಿದೆದಾಂತೇವಾಡ ಮತ್ತು ಬಿಜಾಪುರ ಜಿಲ್ಲೆ ಗಡಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಗಿರ್ಸಾಪರ, ನೆಲಗೋಡ, ಬೋಡ್ಗಾ ಮತ್ತು ಇಕೆಲಿ ಗ್ರಾಮಗಳ ಕಾಡುಗಳಲ್ಲಿ ಮಾವೋವಾದಿಗಳ ಇರುವಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.ಈ ವೇಳೆ ನಕ್ಸಲರು ಮತ್ತು ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ನಕ್ಸಲರು ಬಲಿಯಾಗಿದ್ದಾರೆ. ಈ ಪೈಕಿ ತಲೆಗೆ 25 ಲಕ್ಷ ರು. ಇನಾಮು ಹೊಂದಿದ್ದ ತಮಿಳುನಾಡು ಮೂಲದ ಸುಧಾಕರ್ ಅಲಿಯಾಸ್ ಮುರುಳಿ ಕೂಡ ಸೇರಿದ್ದಾನೆ ಎನ್ನಲಾಗಿದ್ದು, ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ನಿಗೂಢ ಸಾವಿಗೆ ಮರುಜೀವ! ರಾಜಕೀಯದಲ್ಲಿ ಅಲ್ಲೋಲ- ಕಲ್ಲೋಲ