ಐಎನ್‌ಎಸ್‌ ವಿರಾಟ್‌ ನೌಕೆ ರಕ್ಷಿಸುವಂತೆ ಕೋರಿದ್ದ ಅರ್ಜಿ ಸುಪ್ರಿಂಕೋರ್ಟ್‌ನಲ್ಲಿ ವಜಾ!

Published : Apr 13, 2021, 09:56 AM IST
ಐಎನ್‌ಎಸ್‌ ವಿರಾಟ್‌ ನೌಕೆ ರಕ್ಷಿಸುವಂತೆ ಕೋರಿದ್ದ ಅರ್ಜಿ ಸುಪ್ರಿಂಕೋರ್ಟ್‌ನಲ್ಲಿ ವಜಾ!

ಸಾರಾಂಶ

ಸೇವೆಯಿಂದ ನಿವೃತ್ತಿ ಆಗಿ ಗುಜರಿ ಸೇರಿರುವ ಐಎನ್‌ಎಸ್‌ ವಿರಾಟ್‌ ನೌಕೆ|  ನೌಕೆಯನ್ನು ಒಡೆದುಹಾಕುವ ಬದಲು ಅದನ್ನು ಹಾಗೆಯೇ ಕಾಪಾಡಿಕೊಂಡು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಬೇಕು| ಖಾಸಗಿ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ(ಏ.13): ಸೇವೆಯಿಂದ ನಿವೃತ್ತಿ ಆಗಿ ಗುಜರಿ ಸೇರಿರುವ ಐಎನ್‌ಎಸ್‌ ವಿರಾಟ್‌ ನೌಕೆಯನ್ನು ಒಡೆದುಹಾಕುವ ಬದಲು ಅದನ್ನು ಹಾಗೆಯೇ ಕಾಪಾಡಿಕೊಂಡು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಬೇಕು ಎಂದು ಕೋರಿ ಖಾಸಗಿ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

ನೌಕೆಯನ್ನು ಒಡೆಯುವುದರ ವಿರುದ್ಧ ಎನ್ವಿಟೆಕ್‌ ಮರೈನ್‌ ಕನ್ಸಲ್ಟಂಟ್‌ ಎಂಬ ಖಾಸಗಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಅವರಿದ್ದ ತ್ರಿಸದಸ್ಯ ಪೀಠ, ಈ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹೈಕೋರ್ಟ್‌ ನಿಮಗೆ ಒಂದು ಅವಕಾಶವನ್ನು ನೀಡಿತ್ತು. ಆದರೆ, ಸರ್ಕಾರ ಅದನ್ನು ಒಪ್ಪಿಕೊಂಡಿಲ್ಲ. ರಕ್ಷಣಾ ಸಚಿವಾಲಯ ನಿಮ್ಮ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೀಗಾಗಿ ನಾವು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಐಎನ್‌ಎಸ್‌ ವಿರಾಟ್‌ ನೌಕೆಯನ್ನು ಶ್ರೀರಾಮ್‌ ಗ್ರೂಪ್‌ ಈಗಾಗಲೇ ಖರೀದಿಸಿದ್ದು, ಗುಜರಾತಿನ ಅಲಾಂಗ್‌ ಬಂದರಿನಲ್ಲಿ ಹಡಗನ್ನು ಒಡೆಯುವ ಪ್ರಕ್ರಿಯೆಯನ್ನು ಆರಂಭಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?