ನಟ, ರಾಜಕಾರಣಿ ವಿಜಯಕಾಂತ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Published : May 19, 2021, 06:14 PM IST
ನಟ, ರಾಜಕಾರಣಿ ವಿಜಯಕಾಂತ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸಾರಾಂಶ

* ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ತೀವ್ರ ಅನಾರೋಗ್ಯ * ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ ಆಸ್ಪತ್ರೆಗೆ ದಾಖಲು *  ವಿಜಯಕಾಂತ್ ಉಸಿರಾಟದಲ್ಲಿ ಏರುಪೇರು

ಚೆನ್ನೈ, (ಮೇ.19): ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ತೀವ್ರ ಅನಾರೋಗ್ಯದಿಂದಾಗಿ ಇಂದು (ಬುಧವಾರ) ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಉಸಿರಾಟದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ವಿಜಯ್ ಕಾಂತ್ ರನ್ನು ಬೆಳಗಿನ ಜಾವ 3 ಗಂಟೆಗೆ ಚೆನ್ನೈನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಬಂದಿಲ್ಲ. 

1,250 ಕೋಟಿ ರೂ ಪ್ಯಾಕೇಜ್ ಪರಿಹಾರ, ಎಬಿಡಿ ನಿರ್ಧಾರಕ್ಕೆ ಫ್ಯಾನ್ಸ್ ಬೇಸರ; ಮೇ.19ರ ಟಾಪ್ 10 ಸುದ್ದಿ!

ಕಳೆದ ಸೆಪ್ಟೆಂಬರ್ ನಲ್ಲಿ ವಿಜಯ್ ಕಾಂತ್‌ಗೆ ಕೊರೋನಾ ವೈರಸ್ ತಗುಲಿತ್ತು.ಇದಾದ ಬಳಿಕ ಅವರಿಗೆ ಪದೇ ಪದೇ ಆರೋಗ್ಯ ಕೈ ಕೊಡುತ್ತಲೇ ಇದೆ. 

ಸೆಪ್ಟೆಂಬರ್ 22 ರಂದು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದ ವಿಜಯಕಾಂತ್ ನಂತರ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಕೂಡ ಕೋವಿಡ್ ಸೋಂಕಿನಿಂದ ಬಳಲಿದ್ದರು. ಇಬ್ಬರೂ ಅಕ್ಟೋಬರ್ 2ರಂದು ಚೇತರಿಕೆ ಹೊಂದಿ ಮನೆಗೆ ತೆರಳಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಲ್ಲೂ ಹಿಂಸೆ ಆದೀತು ಹುಷಾರ್‌: ರಾಜ್ಯಗಳಿಗೆ ಕೇಂದ್ರದಿಂದ ಅಲರ್ಟ್
India Latest News Live: 2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ