'ಹಣೆಗೆ ಕುಂಕುಮ, ಕೈಗೆ ಪವಿತ್ರ ದಾರಬೇಡ' ಡಿಎಂಕೆ ಕಾರ್ಯಕರ್ತರಿಗೆ ಎ. ರಾಜಾ ವಿವಾದಾತ್ಮಕ ಸಲಹೆ!

Published : Apr 04, 2025, 04:22 AM ISTUpdated : Apr 04, 2025, 07:23 AM IST
'ಹಣೆಗೆ ಕುಂಕುಮ, ಕೈಗೆ ಪವಿತ್ರ ದಾರಬೇಡ' ಡಿಎಂಕೆ ಕಾರ್ಯಕರ್ತರಿಗೆ ಎ. ರಾಜಾ ವಿವಾದಾತ್ಮಕ ಸಲಹೆ!

ಸಾರಾಂಶ

ಡಿಎಂಕೆ ಕಾರ್ಯಕರ್ತರು ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರ ಧರಿಸಕೂಡದು ಎಂದು ಎ. ರಾಜಾ ಸಲಹೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಚೆನ್ನೈ: ಡಿಎಂಕೆ ಪಕ್ಷದ ಕಾರ್ಯಕರ್ತರು ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರ ಧರಿಸಕೂಡದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ. ರಾಜಾ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ನೀಲಗಿರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಡಿಎಂಕೆ ಕಾರ್ಯಕರ್ತರು ಸಂಘಿಗಳಂತೆ (ಆರ್‌ಎಸ್‌ಎಸ್‌ ಸ್ವಯಂಸೇವಕರು) ವೇಷಭೂಷಣ ಧರಿಸಬಾರದು. ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರವನ್ನು ಸಂಘಿಗಳು ಧರಿಸುತ್ತಾರೆ. ಇದರಿಂದ ಅವರು ಮತ್ತು ನಿಮ್ಮನ್ನು ಗುರುತು ಹಿಡಿಯುವುದು ಕಷ್ಟವಾಗುತ್ತದೆ. ಕನಿಷ್ಠ ಪಕ್ಷ ವಿದ್ಯಾರ್ಥಿ ಕಾರ್ಯಕರ್ತರಾದರೂ ಕುಂಕುಮ ತೆಗೆಯಿರಿ. ನಿಮ್ಮ ಪೋಷಕರು ನಿಮ್ಮ ಹಣೆಯ ಮೇಲೆ ವಿಭೂತಿಯನ್ನು ಇಟ್ಟರೆ, ಅದನ್ನು ಇಟ್ಟುಕೊಳ್ಳಿ. ಆದರೆ ಡಿಎಂಕೆ ಧೋತಿ ಧರಿಸಿದ ನಂತರ ಅಥವಾ ಪಕ್ಷದ ಕಾರ್ಯಕ್ರಮಕ್ಕೆ ಬಂದಾಗ ಅದನ್ನು ತೆಗೆದುಹಾಕಿ’ ಎಂದು ಮನವಿ ಮಾಡಿದ್ದಾರೆ.

DMK-ADMK ಮರುಮೈತ್ರಿ ಇಲ್ಲ, ಅಮಿತ್ ಶಾ ಭೇಟಿ ಮಾಡಿ ಬಿಜೆಪಿ ಜತೆ ಮೈತ್ರಿ ಸುಳಿವು ನೀಡಿದ್ರಾ ಪಳನಿಸ್ವಾಮಿ!

ಈ ಹೇಳಿಕೆಗೆ ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ತಮಿಳುನಾಡು ಬಿಜೆಪಿ ವಕ್ತಾರರು ಇದನ್ನು ಹಿಂದೂ ಸಂಪ್ರದಾಯಗಳಿಗೆ ಅವಮಾನ ಎಂದು ಟೀಕಿಸಿದ್ದಾರೆ ಮತ್ತು ಡಿಎಂಕೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಡಿಎಂಕೆ ಪಕ್ಷದ ಕೆಲವು ನಾಯಕರು ಇದು ಎ. ರಾಜಾ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಮರ್ಥಿಸಿಕೊಂಡಿದ್ದಾರೆ ಮತ್ತು ಪಕ್ಷದ ಅಧಿಕೃತ ನಿಲುವು ಇದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವಿವಾದವು ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana