ಮೇಲ್ವರ್ಗ ಮೀಸಲು ಪ್ರಶ್ನಿಸಿ ಡಿಎಂಕೆ ಸುಪ್ರೀಂಕೋರ್ಟ್‌ಗೆ

Published : Dec 06, 2022, 07:25 AM IST
ಮೇಲ್ವರ್ಗ ಮೀಸಲು ಪ್ರಶ್ನಿಸಿ ಡಿಎಂಕೆ ಸುಪ್ರೀಂಕೋರ್ಟ್‌ಗೆ

ಸಾರಾಂಶ

ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೇಲ್ವರ್ಗಗಳಿಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪಿನ ಮರುಪರಿಶೀಲನೆ ಕೋರಿ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಮೀಸಲಾತಿ ತಾರತಮ್ಯವನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ವಾದಿಸಿದೆ.

ನವದೆಹಲಿ: ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೇಲ್ವರ್ಗಗಳಿಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪಿನ ಮರುಪರಿಶೀಲನೆ ಕೋರಿ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಮೀಸಲಾತಿ ತಾರತಮ್ಯವನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ವಾದಿಸಿದೆ. ನ.7ರಂದು ಶೇ.10ರಷ್ಟುಮೀಸಲಾತಿ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದರೆ ಇದು ‘ಮಂಡಲ್‌ ತೀರ್ಪು’ ಎಂದೇ ಜನಪ್ರಿಯತೆ ಪಡೆದುಕೊಂಡಿರುವ 1992ರ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠ ನೀಡಿದ ಆದೇಶದ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ವಾದಿಸಿದೆ.

ಇಂದ್ರಾ ಸಾಹ್ನಿ (Indra Sawhney) ವರ್ಸಸ್‌ ಕೇಂದ್ರ ಸರ್ಕಾರದ (Central Govt)ನಡುವಿನ ಪ್ರಕರಣದಲ್ಲಿ ಸಂವಿಧಾನದ ಮೂಲ ರೂಪಕ್ಕೆ ಧಕ್ಕೆ ತರಬಾರದು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ ಶೇ.10ರಷ್ಟು ಮೀಸಲಾತಿಯನ್ನು ಮಾನ್ಯ ಮಾಡುವ ಮೂಲಕ ಇದನ್ನು ಉಲ್ಲಂಘಿಸಲಾಗಿದೆ. ಆರ್ಥಿಕ ಅಂಶವನ್ನು ಮಾನದಂಡವಾಗಿಟ್ಟುಕೊಂಡು ಮೀಸಲಾತಿ ನೀಡುವುದು ಸಂವಿಧಾನಕ್ಕೆ (Constitution)ವಿರೋಧವಾಗಿದೆ ಎಂದು ಡಿಎಂಕೆ ತಿಳಿಸಿದೆ.

ಸಂಸತ್ತಲ್ಲಿ ಮೇಲ್ವರ್ಗ ಮೀಸಲು ಪ್ರಸ್ತಾಪಕ್ಕೆ ಕಾಂಗ್ರೆಸ್‌ ನಿರ್ಧಾರ

ಈ ಹಿಂದೆ ಕಾಂಗ್ರೆಸ್ ಕೂಡ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (winter session of the Parliament) ಮೇಲ್ವರ್ಗದ ಆರ್ಥಿಕ ಹಿಂದುಳಿದವರ ಮೀಸಲಾತಿ, ಆರ್ಥಿಕತೆ ಹಾಗೂ ಗಡಿಗಳ ಪರಿಸ್ಥಿತಿ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು  ನಿರ್ಧರಿಸಿತ್ತು. ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮನೆಯಲ್ಲಿ ಪಕ್ಷದ ಸಂಸದೀಯ ಕಾರ್ಯತಂತ್ರ ಗುಂಪು ಸಭೆ ಸೇರಿದ್ದ ಸಂದರ್ಭದಲ್ಲಿ, ದೇಶದ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಅವುಗಳನ್ನು ದುರ್ಬಲಗೊಳಿಸುತ್ತಿರುವುದರ ಬಗ್ಗೆಯೂ ಧ್ವನಿ ಎತ್ತಲು ನಿರ್ಧರಿಸಲಾಗಿತ್ತು. 17 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರಗಳನ್ನು ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದರು. ಡಿ.7 ರಂದು ಅಂದರೆ ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ.

ಮೇಲ್ವರ್ಗ ಮೀಸಲು ದಾವೆ ಸಂವಿಧಾನ ಪೀಠಕ್ಕೆ ಈಗಲೇ ಇಲ್ಲ

ಮೇಲ್ವರ್ಗ ಮೀಸಲು ಜಾರಿ: ಷರತ್ತುಗಳು ಅನ್ವಯ!

ಗುಜರಾತಲ್ಲಿ ಇಂದಿನಿಂದ ಮೇಲ್ವರ್ಗ ಮೀಸಲಾತಿ ಜಾರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ