
ನವದೆಹಲಿ(ಏ.09): ಏಪ್ರಿಲ್ 12ರ ಭಾನುವಾರ ಸಂಜೆ 5 ಗಂಟೆಗೆ ದೇಶದ ಪ್ರಜೆಗಳು ತಮ್ಮ ಮನೆಯ ಬಾಲ್ಕನಿಗೆ ಬಂದು 5 ನಿಮಿಷಗಳ ಕಾಲ ಎದ್ದು ನಿಂತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಪ್ಪಾಳೆ ತಟ್ಟಿಗೌರವ ಸಮರ್ಪಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೋದಿ, ಇದು ವಿವಾದಕ್ಕೆ ಎಡೆಮಾಡುವ ಕಿಡಿಗೇಡಿತನವೆಂದು ತೋರುತ್ತಿದೆ ಎಂದು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ನಿಜಕ್ಕೂ ನನಗೆ ಗೌರವ ಸಲ್ಲಿಸಬೇಕು ಎಂದಿದ್ದರೆ ಕೊರೋನಾ ವೈರಸ್ ತೊಲಗುವವರೆಗಾದರೂ ಬಡ ಕುಟುಂಬಗಳ ಜವಾಬ್ದಾರಿ ತೆಗೆದುಕೊಳ್ಳಿ. ಅದು ನನಗೆ ನೀವು ಸಲ್ಲಿಸುವ ದೊಡ್ಡ ಗೌರವ’ ಎಂದು ಮನವಿ ಮಾಡಿಕೊಂಡಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ