ಮಣಿಪುರ ಹಿಂಸಾಚಾರದ ಬಗ್ಗೆ ಹೊರಗೆ ಬೇಡ, ಸಂಸತ್ತಿನ ಒಳಗೆ ಹೇಳಿಕೆ ನೀಡಿ: ಮೋದಿಗೆ ಖರ್ಗೆ

Published : Jul 22, 2023, 09:14 AM IST
 ಮಣಿಪುರ ಹಿಂಸಾಚಾರದ ಬಗ್ಗೆ ಹೊರಗೆ ಬೇಡ, ಸಂಸತ್ತಿನ ಒಳಗೆ ಹೇಳಿಕೆ ನೀಡಿ: ಮೋದಿಗೆ ಖರ್ಗೆ

ಸಾರಾಂಶ

 ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಗಲಭೆ ಬಗ್ಗೆ ಸಂಸತ್ತಿನ ಹೊರಗೆ ನೀಡಿದ ಹೇಳಿಕೆಗೆ ಆಕ್ಷೇಪಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಒಳಗೆ ಮೋದಿ ಹೇಳಿಕೆ ನೀಡಬೇಕು ಎಂದು ಅಗ್ರಹಿಸಿದ್ದಾರೆ.  

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಗಲಭೆ ಬಗ್ಗೆ ಸಂಸತ್ತಿನ ಹೊರಗೆ ನೀಡಿದ ಹೇಳಿಕೆಗೆ ಆಕ್ಷೇಪಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಒಳಗೆ ಮೋದಿ ಹೇಳಿಕೆ ನೀಡಬೇಕು ಎಂದು ಅಗ್ರಹಿಸಿದ್ದಾರೆ.  ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ‘ಮಣಿಪುರ ಹೊತ್ತಿ ಉರಿಯುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ, ಪರೇಡ್‌ ಮತ್ತು ಭೀಕರ ಹಿಂಸೆ ನಡೆಯುತ್ತಿದೆ. ಆದರೆ ಇಷ್ಟು ದಿನ ಪ್ರಧಾನಿ ಮೌನ ವಹಿಸಿದ್ದಾರೆ. ಇಷ್ಟುಆಕ್ರೋಶದ ನಂತರ ಈಗ ಸಂಸತ್ತಿನ ಹೊರಗೆ ಹೇಳಿಕೆ ನೀಡಿದ್ದಾರೆ. ನಾವು ಮಣಿಪುರದ ಬಗ್ಗೆ ವಿವರವಾದ ಚರ್ಚೆಯನ್ನು ಬಯಸುತ್ತೇವೆ ಮತ್ತು ಪ್ರಧಾನಿ ಮೋದಿ ಅವರು ಸದನದಲ್ಲಿ ಅದರ ಬಗ್ಗೆ ವಿಸ್ತಾರವಾದ ಹೇಳಿಕೆ ನೀಡಬೇಕು. ಮಣಿಪುರ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ನಾವು ಒತ್ತಾಯಿಸುತ್ತೇವೆ’ ಎಂದಿದ್ದಾರೆ.

ಮಹಿಳೆಯರ ನಗ್ನ ಪರೇಡ್‌ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್‌ ಮಾಡಿಸಿ, ಅವರ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯನ್ನು ವಿರೋಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ದೇಶಾದ್ಯಂತ ವಿವಿಧೆಡೆ ಭಾರೀ ಪ್ರತಿಭಟನೆಗಳು ನಡೆದಿವೆ. ದೆಹಲಿಯಲ್ಲಿ ಆಲ್‌ ಇಂಡಿಯಾ ಸ್ಟುಡೆಂಟ್ಸ್‌ ಅಸೋಸಿಯೇಷನ್‌ ಕಾರ್ಯಕರ್ತರ ನೇತೃತ್ವದಲ್ಲಿ ಜಮಾವಣೆಗೊಂಡಿದ್ದ ಜನರು ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ ಮಹಿಳಾ ದೌರ್ಜನ್ಯ ನಿಯಂತ್ರಿಸುವಂತೆ ಆಗ್ರಹಿಸಿ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

ಮಣಿಪುರ ಯುವತಿಯರ ಬೆತ್ತಲೆ ಪ್ರಕರಣಕ್ಕೆ ಪ್ರಧಾನಿಯ ಟೀಕಿಸಿದ ಕಿಶೋರ್‌, 'ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ..'

ತಮಿಳು ನಾಡಿನ ಚೆನ್ನೈನಲ್ಲಿ ‘ಮಣಿಪುರ ರಕ್ಷಿಸಿ’ ಎಂಬ ನಾಮಫಲಕಗಳನ್ನು ಹಿಡಿದು ದುಷ್ಕೃತ್ಯವನ್ನು ವಿರೋಧಿಸಿ ರಾಜ್ಯ ಯುವ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಈ ವೇಳೆ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.  ಜಾರ್ಖಂಡ್‌ನಲ್ಲಿಯೂ ಅನೇಕ ಬುಡಕಟ್ಟು ಸಮುದಾಯಗಳ ಸಂಘಟನೆಗಳು ಶುಕ್ರವಾರ ರಾಂಚಿಯಲ್ಲಿ ಮಣಿಪುರದಲ್ಲಿನ ಮಹಿಳಾ ದೌರ್ಜನ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಕೋರಿ, ಘಟನೆಯನ್ನು ವಿರೋಧಿಸಿ ಪ್ರತಿಭಟಿಸಿದವು. ಅಸ್ಸಾಂ ಪ್ರಾದೇಶಿಕ ಕಾಂಗ್ರೆಸ್‌ ವಿವಿಧೆಡೆ ಮಣಿಪುರದ ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿತು. ಈ ವೇಳೆ ಹಲವು ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು.

ಕಾರ್ಗಿಲ್‌ನಲ್ಲಿ ದೇಶ ಕಾಪಾಡಿದ ನನ್ಗೆ, ಪತ್ನಿ ಕಾಪಾಡಲಾಗಲಿಲ್ಲ,ನಗ್ನ ಮೆರವಣಿಗೆ ಸಂತ್ರಸ್ತೆ ಪತಿ ಕಣ್ಣೀರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್