
ನವದೆಹಲಿ(ಮಾ.22): ಆಫ್ಘಾನಿಸ್ತಾನದ ಹಿಂದುಕುಷ್‌ನಲ್ಲಿ ನಿನ್ನೆ(ಮಾ.21) ರಾತ್ರಿ ಸಂಭವಿಸಿದ ಭೂಕಂಪದಿಂದ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಪಂಕನವಾಗಿತ್ತು. ಈ ಆತಂಕದಿಂದ ಹೊರಬರುವ ಮುನ್ನವೇ ಇಂದು ಮತ್ತೆ ದೆಹಲಿಯಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 2.2 ತೀವ್ರತೆ ದಾಖಲಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೋಡಿದ್ದಾರೆ. ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದವರೂ ಹೊರಬಂದಿದ್ದಾರೆ. ಇದೀಗ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದೆಹಲಿಯಲ್ಲಿ ಇಂದು ಪದ್ಮ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ನಡೆಯುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯುತ್ತಿದ್ದ ವೇಳೆಯೂ ಇತ್ತ ರಾಜಧಾನಿ ವ್ಯಾಪ್ತಿ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ.
ಹಲವರು ಮನೆಯಲ್ಲಿನ ವಸ್ತುಗಳು ಕೆಳಕ್ಕೆ ಬಿದ್ದಿವೆ. ಭೂಕಂಪನ ಅನಭವವಾಗುತ್ತಿದ್ದಂತೆ ಜನರು ಹೊರಬಂದಿದ್ದಾರೆ. ಅಪಾರ್ಟ್‌ಮೆಂಟ್‌ಗಳಲ್ಲಿ ಜನರು ಧಾವಂತದಿಂದ ಹೊರಬಂದಿದ್ದಾರೆ. ಇದೀಗ ದೆಹಲಿ ಹಾಗೂ ಉತ್ತರ ಭಾರತದಲ್ಲಿ ಆತಂಕದ ವಾತಾರವಣರ ನಿರ್ಮಾಣವಾಗಿದೆ.
ನಿನ್ನೆ ರಾತ್ರಿ ದೆಹಲಿಯಲ್ಲಿ ಕಂಪಿಸಿದ್ದ ಭೂಮಿ
ರಿಕ್ಟರ್ ಮಾಪಕದಲ್ಲಿ 6.6ರಷ್ಟುಭಾರೀ ತೀವ್ರತೆ ಹೊಂದಿದ್ದ ಭೂಕಂಪವೊಂದು ಮಂಗಳವಾರ ರಾತ್ರಿ(ಮಾ.21) ಸಂಭವಿಸಿತ್ತು. ಭೂಕಂಪನದ ಕೇಂದ್ರಬಿಂದು ಆಷ್ಘಾನಿಸ್ತಾನದ ಹಿಂದುಕುಷ್ ಪರ್ವತದಲ್ಲಿತ್ತು ಎಂದು ಮೂಲಗಳು ತಿಳಿಸಿವೆ. ಭೂಕಂಪ ಭಾರೀ ತೀವ್ರತೆ ಹೊಂದಿದ್ದ ಕಾರಣ ಅದರ ಅನುಭವ ನೆರೆಹೊರೆಯ ದೇಶಗಳಾದ ತುರ್ಕೇಮೇನಿಸ್ತಾನ, ಭಾರತ, ಕಜಕಿಸ್ತಾನ, ಪಾಕಿಸ್ತಾನ, ಉಜ್ಬೇಕಿಸ್ತಾನ, ಚೀನಾ, ಆಷ್ಘಾನಿಸ್ತಾನ ಮೊದಲಾದ ದೇಶಗಳಲ್ಲಿ ಆಗಿದೆ. ಮಂಗಳವಾರ ರಾತ್ರಿ 10.17ರ ವೇಳೆಗೆ ಭೂಕಂಪ ಸಂಭವಿಸಿದ್ದು, ಈ ವೇಳೆ ಮನೆ, ಕಚೇರಿಯೊಳಗಿದ್ದ ಸಾವಿರಾರು ಜನರು ಹೊರಗೆ ಓಡಿಬಂದು ರಸ್ತೆಯಲ್ಲಿ ಆತಂಕಿತರಾಗಿ ನಿಂತಿದ್ದ ದೃಶ್ಯಗಳು ದೆಹಲಿ, ಪಂಜಾಬ್, ಹರ್ಯಾಣ,ರಾಜಸ್ಥಾನ ಮೊದಲಾದ ರಾಜ್ಯಗಳಲ್ಲಿ ಕಂಡುಬಂದಿತು. ಸುಮಾರು ಒಂದು ನಿಮಿಷಗಳ ಕಾಲ ಭೂಮಿ ನಡುಗಿದ ಅನುಭವ ಆಗಿದೆ ಎಂದು ನಿವಾಸಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ