BREAKING: ದೆಹಲಿ ಹಾಗೂ ಉತ್ತರ ಭಾರತದಲ್ಲಿ ಭೂಕಂಪ!

Published : Feb 12, 2021, 10:57 PM ISTUpdated : Feb 12, 2021, 11:13 PM IST
BREAKING: ದೆಹಲಿ ಹಾಗೂ ಉತ್ತರ ಭಾರತದಲ್ಲಿ ಭೂಕಂಪ!

ಸಾರಾಂಶ

ದೆಹಲಿ ಹಾಗೂ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ.

ನವದೆಹಲಿ(ಫೆ.12): ಉತ್ತರಖಂಡ ಪ್ರವಾಹ ದುರಂತದ ಬೆನ್ನಲ್ಲೇ ಇದೀಗ ದೆಹಲಿ ಹಾಗೂ ಉತ್ತರ ಭಾರತದಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪನದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪದ ಮೂಲ ಪಂಜಾಬ್‌ನ ಅಮೃತಸರವಾಗಿದ್ದು, ದೆಹಲಿ, ಕಾಶ್ಮೀರ ಕಣಿವೆ, ಪಂಜಾಬ್ ಉತ್ತರ ಪ್ರದೇಶದ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಶುಕ್ರವಾರ(ಫೆ.12) ರಾತ್ರಿ 10.34ರ ವೇಳೆ ಭೂಕಂಪ ಸಂಭವಿಸಿದೆ

ಅರುಣಾಚಲ ಪ್ರದೇಶದಲ್ಲಿ ಲಘು ಭೂಕಂಪ; 10 ಕಿ.ಮೀ ವರೆಗೆ ಕಂಪಿಸಿದ ಭೂಮಿ!.

ಭೂಕಂಪದ ಕೇಂದ್ರಬಿಂದು ಪಂಜಾಬ್‌ನ ಅಮೃತಸರದಿಂದ 21 ಕಿ.ಮೀ ದೂರದಲ್ಲಿ ಘಟಿಸಿದೆ ಎಂದು ಭಾರತದ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.  ಭೂಕಂಪನ ಅನುಭವ ಆಗುತ್ತಿದ್ದಂತೆ ಜನರು ಮನೆ, ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕೆಲ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಸದ್ಯ ಯಾವುದೇ ಪ್ರಾಣ ಹಾನಿ ಕುರಿತ ವರದಿಯಾಗಿಲ್ಲ. ಇದರ ತೀವ್ರತೆ 10 ಕಿ.ಮೀ ವರೆಗೆ ವ್ಯಾಪಿಸಿದೆ. ತೀವ್ರ ಭೂಕಂಪನದಿಂದ ದೆಹಲಿ ಸುತ್ತಮುತ್ತ ಕೆಲ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?