
ನವದೆಹಲಿ(ಜು.10): ಯಸ್ ಬ್ಯಾಂಕ್ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಸಹ ಸ್ಥಾಪಕ ರಾಣಾ ಕಪೂರ್ ಮತ್ತು ಇತರರಿಗೆ ಸೇರಿದ 2,800 ಕೋಟಿ ರು. ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಜಪ್ತಿ ಮಾಡಿದೆ.
ನೌಕರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕಪೂರ್ ಅವರಿಗೆ ಸೇರಿದ ಲಂಡನ್ ಮತ್ತು ನ್ಯೂಯಾರ್ಕ್ನಲ್ಲಿರುವ ಫ್ಲ್ಯಾಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಪೂರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಚ್‌ಎಫ್‌ಎಲ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನೂ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ