ರಾಜ್ಯ ಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಡಿ ನೋಟಿಸ್
ಆಸ್ಕರ್ ಫರ್ನಾಂಡಿಸ್ ಈ ಹಿಂದೆ ಜವಾಹರಲಾಲ್ ನೆಹರು ಟ್ರಸ್ಟ್ ಗೆ ಅಧ್ಯಕ್ಷರಾಗಿದ್ದರು
ಫರ್ನಾಂಡಿಸ್ ನಿಧನ ನಂತರ ಖರ್ಗೆ ಟ್ರಸ್ಟ್ ಗೆ ಅಧ್ಯಕ್ಷ ಆಗಿದ್ದರು
ನವದೆಹಲಿ, (ಏ.11): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ(National Herald Case) ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge ) ಅವರಿಗೆ ಜಾರಿ ನಿರ್ದೇಶನಾಲಯ(ED) ನೋಟಿಸ್ ಜಾರಿಗೊಳಿಸಿದೆ.
ಆಸ್ಕರ್ ಫರ್ನಾಂಡಿಸ್ ಈ ಹಿಂದೆ ಜವಾಹರಲಾಲ್ ನೆಹರು ಟ್ರಸ್ಟ್ ಗೆ ಅಧ್ಯಕ್ಷರಾಗಿದ್ದರು. ಫರ್ನಾಂಡಿಸ್ ನಿಧನ ನಂತರ ಖರ್ಗೆ ಟ್ರಸ್ಟ್ ಗೆ ಅಧ್ಯಕ್ಷ ಆಗಿದ್ದರು. 1937ರ ನವೆಂಬರ್ 20ರಂದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಸ್ಥೆಯು ಬಹಾದ್ದೂರ್ ಶಾ ಜಫರ್ ಮಾರ್ಗ್, ನವದೆಹಲಿ ನೊಂದಾಣಿ ವಿಳಾಸ ಮತ್ತು 5 ಲಕ್ಷ ರೂಪಾಯಿ ಬಂಡವಾಳದ ಮೂಲಕ ಅಸ್ತಿತ್ವಕ್ಕೆ ಬಂದಿತ್ತು.
ನ್ಯಾಷನಲ್ ಹೆರಾಲ್ಡ್‌ಗೆ ಸೇರಿದ ನಿವೇಶನ ಜಪ್ತಿ
ಈ ಸಂಸ್ಥೆಗೆ ಜವಾಹರ್ ಲಾಲ್ ನೆಹರೂ ಮಾರ್ಗದರ್ಶಿ ಹಾಗೂ ಮುಖ್ಯಸ್ಥರಾಗಿದ್ದರು. ಐದು ಸಾವಿರ ಸ್ವಾತಂತ್ರ್ಯ ಹೋರಾಟಗಾರರು ಈ ಸಂಸ್ಥೆಯ ಷೇರನ್ನು ಹೊಂದಿದ್ದರು, ಇದರ ಜೊತೆಗೆ ನೂರು ರೂಪಾಯಿ ಮುಖಬೆಲೆಯ 2,000 ಮತ್ತು 10 ರೂಪಾಯಿ ಮುಖಬೆಲೆಯ 30,000 ಇಕ್ವಿಟಿ ಷೇರನ್ನು ಇವರಿಗೆಲ್ಲಾ ಹಂಚಲಾಗಿತ್ತು.
ಈ ಕಂಪೆನಿ 1938ರ ಸೆಪ್ಟೆಂಬರ್ 9ರಂದು ಜವಾಹರಲಾಲ್ ನೆಹರೂ ಅವರ ನೇತೃತ್ವದಲ್ಲಿ ಲಖನೌದಲ್ಲಿ ಇಂಗ್ಲಿಷ್ ಆವೃತ್ತಿ 'ನ್ಯಾಷನಲ್ ಹೆರಾಲ್ಡ್' ಎನ್ನುವ ಹೆಸರಿನ ಮೂಲಕ ಪತ್ರಿಕೆಯನ್ನು ಆರಂಭಿಸಲಾಗಿತ್ತು. ಬಳಿಕ ಹಿಂದಿ ಆವೃತ್ತಿ ನವಜೀವನ್ ಮತ್ತು ಉರ್ದು ಆವೃತ್ತಿ ಕ್ವಾಮಿ ಆವಾಜ್ ಎನ್ನುವ ಪತ್ರಿಕೆಗಳನ್ನೂ ಆರಂಭಿಸಿತು. ಭಾರತಕ್ಕೆ ಸ್ವಾತಂತ್ರ್ಯ ಬಂದ ತರುವಾಯ ಅಂದಿನ ಪ್ರಧಾನಿ ನೆಹರೂ, ಸಂಸ್ಥೆಗೆ ನವದೆಹಲಿ, ಲಕ್ನೋ, ಭೋಪಾಲ್, ಮುಂಬೈ, ಇಂದೋರ್ ಸೇರಿದಂತೆ ಹಲವಡೆ ಭೂಮಿಯನ್ನು ಮಂಜೂರು ಮಾಡಲಾಗಿತ್ತು.
ಅವ್ಯವಹಾರದ ಆರೋಪ:
ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು. ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.
ನ್ಯಾಷನಲ್ ಹೆರಾಲ್ಡ್ ಮತ್ತು ಕಾಂಗ್ರೆಸ್ ನಡುವಿನ ನಂಟು
ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ವೈಐಎಲ್ 90.25 ಕೋಟಿ ರೂಪಾಯಿ ಬಡ್ಡಿರಹಿತ ಸಾಲವನ್ನು ನೀಡಿತ್ತು. ಇದರಲ್ಲಿ ಎಐಸಿಸಿ ಖಜಾನೆಯಿಂದ ಐವತ್ತು ಲಕ್ಷ ರೂಪಾಯಿ ನೇರವಾಗಿ ವರ್ಗಾವಣೆಯಾಗಿತ್ತು ಎಂಬ ಆರೋಪವಿದೆ. ಅಲ್ಲದೇ, ಹೆರಾಲ್ಡ್ ಒಡೆತನದಲ್ಲಿದ್ದ 'ಹೆರಾಲ್ಡ್ ಹೌಸ್' ನವೀಕರಣಕ್ಕೆ ಒಂದು ಕೋಟಿ ರೂಪಾಯಿ ನೀಡಿತ್ತು ಎಂದು ಹೇಳಲಾಗುತ್ತಿದೆ.
ಆರೋಪವೇನು?ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯನ್ನು ಅಕ್ರಮ ಮಾರ್ಗದಿಂದ ಖರೀದಿಸಿದ ಆರೋಪ ರಾಹುಲ್, ಸೋನಿಯಾ, ಆಸ್ಕರ್ ಒಡೆತನದ ಯಂಗ್ ಇಂಡಿಯಾ ಕಂಪನಿ ಮೇಲೆ ಇದೆ. 90.25 ಕೋಟಿ ರು. ಮೌಲ್ಯದ ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯನ್ನು ಕೇವಲ 50 ಲಕ್ಷ ರುಪಾಯಿ ನೀಡಿ ಖರೀದಿಸಲಾಗಿತ್ತು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ದೂರಿದ್ದರು. ಇದೇ ವೇಳೆ, ತೆರಿಗೆ ವಿವರ ಸಲ್ಲಿಕೆ ವೇಳೆ ಯಂಗ್ ಇಂಡಿಯಾದಲ್ಲಿನ ತಮ್ಮ ಷೇರು ಮೌಲ್ಯ 68 ಲಕ್ಷ ರು. ಎಂದು ರಾಹುಲ್ ಹೇಳಿದ್ದರು. ಆದರೆ ಆದಾಯ ತೆರಿಗೆ ಇಲಾಖೆ ಮೌಲ್ಯಮಾಪನ ಮಾಡಿದಾಗ ಅದರಲ್ಲಿರುವ ರಾಹುಲ್ ಷೇರುಗಳ ಮೌಲ್ಯ 154 ಕೋಟಿ ರುಪಾಯಿ ಎಂದು ತಿಳಿದುಬಂದಿತ್ತು. ಹೀಗಾಗಿ ಇದೊಂದು ತೆರಿಗೆ ವಂಚನೆ ಪ್ರಕರಣ ಎಂಬ ತೀರ್ಮಾನಕ್ಕೆ ಆದಾಯ ತೆರಿಗೆ ಇಲಾಖೆ ಬಂದಿತ್ತು ಹಾಗೂ ಮರುಮೌಲ್ಯಮಾಪನಕ್ಕೆ ಮುಂದಾಗಿತ್ತು. ಅಲ್ಲದೆ, 2011-12ನೇ ಸಾಲಿನಲ್ಲಿ 249.15 ಕೋಟಿ ರು. ತೆರಿಗೆ ಕಟ್ಟಿಎಂದು ಯಂಗ್ ಇಂಡಿಯಾಗೆ ಆದಾಯ ತೆರಿಗೆ ಇಲಾಖೆ ಡಿಮ್ಯಾಂಡ್ ನೋಟಿಸ್ ನೀಡಿತ್ತು.