ಇವಿಎಂ ಮರಳಿಸದಿದ್ದರೆ 2022ರ ಚುನಾವಣೆ ಕಷ್ಟ

Kannadaprabha News   | Asianet News
Published : Sep 03, 2021, 07:43 AM IST
ಇವಿಎಂ ಮರಳಿಸದಿದ್ದರೆ 2022ರ ಚುನಾವಣೆ ಕಷ್ಟ

ಸಾರಾಂಶ

ಕಳೆದ ವರ್ಷ ಮತ್ತು ಈ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ವಿದ್ಯುನ್ಮಾನ ಮತಯಂತ್ರ  ನಿಗದಿತ ಕಾಲಾವಧಿಯಲ್ಲಿ ವಾಪಸ್‌ ನೀಡದಿದ್ದರೆ, 2022ರ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಸುವುದು ಕಷ್ಟ ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ ಮೊರೆ

ನವದೆಹಲಿ (ಸೆ.03): ಕಳೆದ ವರ್ಷ ಮತ್ತು ಈ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ವಿದ್ಯುನ್ಮಾನ ಮತಯಂತ್ರ (ಇವಿಎಂ)ಮತ್ತು ವಿವಿಪ್ಯಾಟ್ಸ್‌ಗಳನ್ನು ನಿಗದಿತ ಕಾಲಾವಧಿಯಲ್ಲಿ ವಾಪಸ್‌ ನೀಡದಿದ್ದರೆ, 2022ರ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಸುವುದು ಕಷ್ಟಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

 ಮುಂದಿನ ವರ್ಷ ಪಂಜಾಜ್‌, ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಬೇಕಿದೆ. ನಿಯಮದ ಪ್ರಕಾರ ಚುನಾವಣಾ ಫಲಿತಾಂಶ ಘೋಷಣೆಯಾದ 45 ದಿನಗಳ ವರೆಗೆ ಇವಿಎಂಗಳನ್ನು ಯಾರೂ ಮುಟ್ಟದಂತೆ ಭದ್ರವಾಗಿ ಇರಿಸಬೇಕು. ಈ ಕಾಲಮಿತಿ ಒಳಗಾಗಿ ಮಾತ್ರ ಫಲಿತಾಂಶದ ವಿರುದ್ಧ ಅರ್ಜಿ ಸಲ್ಲಿಸಲು ಅವಕಾಶವಿದೆ. 

2023ರ ಅಸೆಂಬ್ಲಿ ಎಲೆಕ್ಷನ್‌ಗೆ ಸೆ.28ಕ್ಕೆ ಜೆಡಿಎಸ್ ಮೊದಲ ಪಟ್ಟಿ: ಎಚ್‌ಡಿಕೆ

ಅನಂತರ ಇವಿಎಂಗಳನ್ನು ಮರುಬಳಕೆ ಮಾಡಬಹುದು. ಆದರೆ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಮಾಚ್‌ರ್‍ನಲ್ಲಿ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ, ದೆಹಲಿ, ಪುದುಚೇರಿ, ನವದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶಗಳ ವಿರುದ್ಧ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್‌ ಅನಿರ್ದಿಷ್ಟಾವಧಿ ಕಾಲಾವಕಾಶ ನೀಡಿದೆ. 

ಹಾಗಾಗಿ ಸುಪ್ರೀಂಕೋರ್ಟ್‌ ಅರ್ಜಿ ಸಲ್ಲಿಕೆಗೆ ನಿಗದಿತ ಕಾಲಾವಧಿ ಮಿತಿ ಹೇರದಿದ್ದರೆ ಇಲ್ಲಿ ಬಳಕೆಯಾದ ಇವಿಎಂಗಳನ್ನು ಮರುಬಳಕೆ ಮಾಡುವಂತಿಲ್ಲ. ಒಟ್ಟು 4.5 ಲಕ್ಷ ಇವಿಎಂಗಳು ಇದೇ ಉದ್ದೇಶದಿಂದ ಭದ್ರತೆಯಲ್ಲಿವೆ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ನಲ್ಲಿ ಮನವಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್