ಕರ್ನಾಟಕದಲ್ಲಿ ಎಲೆಕ್ಷನ್, 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಇಂದು ಘೋಷಣೆ!

Published : Oct 15, 2024, 10:27 AM IST
ಕರ್ನಾಟಕದಲ್ಲಿ ಎಲೆಕ್ಷನ್, 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಇಂದು ಘೋಷಣೆ!

ಸಾರಾಂಶ

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸೇರಿ, ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ. ಚುನಾವಣಾ ಆಯೋಗದ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

ನವದಹೆಲಿ(ಅ.15) ಮುಡಾ ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ಹಲವು ಸಂಕಷ್ಟಗಳು ಕಾಂಗ್ರೆಸ್ ಸರ್ಕಾರ ಸುತ್ತಿಕೊಂಡಿದೆ. ಇತ್ತ ವಿಪಕ್ಷ ಬಿಜೆಪಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸತತ ಹೋರಾಟ ನಡೆಸುತ್ತಿದೆ. ಇದರ ನಡುವೆ ಕರ್ನಾಟಕದಲ್ಲಿ ಮತ್ತೆ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಹೌದು, ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಲಿದೆ.  ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ ಕರ್ನಾಟಕ 3 ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಮಹರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೂರು ವಿಧಾನಸಭಾ ಚುನಾವಣೆ ದಿನಾಂಕ ಇಂದು ಆಯೋಗ ಘೋಷಿಸಲಿದೆ. ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂತೆಗೆದುಕೊಳ್ಳುವಿಕೆ, ಮತದಾನ, ಮತ ಎಣಿಕೆ ದಿನಾಂಗಳು ವಿವರಣೆಯನ್ನೂ ಆಯೋಗ ನೀಡಲಿದೆ.

WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದ ಹೆಚ್‌ಡಿ ಕುಮಾರಸ್ವಾಮಿ ಬಳಿಕ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇತ್ತ ಬಳ್ಳಾರಿಯ ಸಂಡೂರು ಕ್ಷೇತ್ರದ ಶಾಸಕ ಇ ತುಕರಾಂ, ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀಮೆ ನೀಡಿದ್ದರು. ಇತ್ತ ಶಿಗ್ಗಾಂವಿ  ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಬಸವರಾಜ್ ಬೊಮ್ಮಾಯಿ, ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಗೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ.

ಇನ್ನು ಭಾರಿ ನಿರೀಕ್ಷೆ ಹುಟ್ಟಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆ ದಿನಾಂಕ ಇಂದೇ ಘೋಷಣೆಯಾಗಲಿದೆ. 288 ಸ್ಥಾನದ ಮಹಾರಾಷ್ಟ್ರ ವಿಧಾನಸಭೆ ನವೆಂಬರ್ 26ಕ್ಕೆ ಅಂತ್ಯಗೊಳ್ಳಲಿದೆ. ಇತ್ತ 81 ಸ್ಥಾನದ ಜಾರ್ಖಂಡ್ ವಿಧಾನಸಭೆ ಜನವರಿ 5, 2025ಕ್ಕೆ ಅಂತ್ಯಗೊಳ್ಳಲಿದೆ. 

ಶಿವಸೇನೆ ಒಡೆದು ಹೋಳಾಗಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಅತ್ತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜೈಲು ವಾಸ, ಕೇಂದ್ರದ ವಿರುದ್ದ ಇಂಡಿಯಾ ಒಕ್ಕೂಟದ ಗಂಭೀರ ಆರೋಪಗಳ ಬಳಿಕ ನಡೆಯುತ್ತಿರುವ ಚುನಾವಣೆ ಇದಾಗಿದೆ.  

ರೈತ ಪ್ರತಿಭಟನೆ ಅಸಲಿಯತ್ತು ಬಯಲು, ಹರ್ಯಾಣ ಕಾಂಗ್ರೆಸ್ ಸೋಲಿಗೆ ಬಿಕೆಯು ಮುಖ್ಯಸ್ಥನ ಸ್ಫೋಟಕ ಹೇಳಿಕೆ!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ