ಭಾರಿ ಕುತೂಹಲ ಕೆರಳಿಸಿದ್ದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹಾಗೂ ಹರ್ಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೆಪ್ಟೆಂಬರ್ 18 ರಂದು ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅಕ್ಟೋಬರ್ 4 ರಂದು ಫಲಿತಾಂಶ ಘೋಷಣೆಯಾಗಲಿದೆ
ನವದೆಹಲಿ(ಆ.16) ಕೇಂದ್ರ ಚುನಾವಣಾ ಆಯೋಗ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣೆ ಜೊತೆಯಾಗಿ ನಡೆಸಲಿದೆ. ಆದರೆ ಮಹಾರಾಷ್ಟ್ರ ಸೇರಿದಂತೆ ಇತರ ಕೆಲ ರಾಜ್ಯಗಳ ಚುನಾವಣೆ ಮುಂದಿನ ದಿನಗಳಲ್ಲಿ ಘೋಷಣೆಯಾಗಲಿದೆ. ಹಲವು ವರ್ಷಗಳಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮ ಮತ್ತು ಕಾಶ್ಮೀರ ಕೊನೆಗೂ ಚುನಾವಣೆಗೆ ಸಜ್ಜಾಗಿದೆ. ಕೇಂದ್ರ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. 3 ಹಂತಗಳಲ್ಲಿ ನಡೆಯಲಿರುವ ಮತದಾನ ಸೆಪ್ಟೆಂಬರ್ 18 ರಂದು ಮತದಾನ ಆರಂಭಗೊಳ್ಳಲಿದೆ. ಅಕ್ಟೋಬರ್ 4 ರಂದು ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಹರ್ಯಾಣದಲ್ಲಿ ಒಂದು ಹಂತದಲ್ಲಿ ಮತದಾನ ನಡೆಯಲಿದೆ.
ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ 3 ಹಂತದಲ್ಲಿ ಅಂದರೆ, ಮೊದಲ ಹಂತ ಸೆಪ್ಟೆಂಬರ್ 18, ಎರಡನೇ ಹಂತ ಸೆಪ್ಟೆಂಬರ್ 25 ಹಾಗೂ ಮೂರನೇ ಹಂತ ಅಕ್ಟೋಬರ್ 1 ರಂದು ನಡೆಯಲಿದೆ. ಜಮ್ಮು ಕಾಶ್ಮೀರ ಹಾಗೂ ಹರ್ಯಾಣ ಎರಡು ರಾಜ್ಯಗಳ ಚುನಾವಣೆ ಫಲಿತಾಂಶ ಅಕ್ಟೋಬರ್ 1 ರಂದು ಘೋಷಣೆಯಾಗಲಿದೆ. ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ತೆರವಾಗಿರುವ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಇದೇ ವೇಳೆ ಘೋಷಣೆಯಾಗುವ ನಿರೀಕ್ಷೆ ಇತ್ತು. ಆದರೆ ಈ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.
4 ವರ್ಷಗಳಿಂದ ಜಿಪಂ, ತಾಪಂ ಎಲೆಕ್ಷನ್ ನಡೆಸದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಚಾಟಿ..!
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಮುಂದೂಡಿದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಇಷ್ಟೇ ಅಲ್ಲ ನಿಗದಿತ ಸಮಯದೊಳಗೆ ಚುನಾವಣೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದರಂತೆ ಆಯೋಗ ಇದೀಗ ಚುನಾವಣೆ ದಿನಾಂಕ ಘೋಷಿಸಿದೆ.
ಜಮ್ಮು ಮತ್ತು ಕಾಶ್ಮೀರ ಕೊನೆಯದಾಗಿ ಚುನಾವಣೆ ಕಂಡಿದ್ದು 2014ರಲ್ಲಿ. ಬರೋಬ್ಬರಿ 10 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿಲ್ಲ. 6 ವರ್ಷಗಳ ಅವಧಿಯ ವಿಧಾನಸಭೆಗೆ ಜನ 87 ಸದಸ್ಯರ ಆಯ್ಕೆ ಮಾಡಲಿದ್ದಾರೆ. 2014ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿದ್ದರೆ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ 28 ಸ್ಥಾನ ಗೆದ್ದಿತ್ತು. ಇನ್ನು ಫಾರುಕ್ ಅಬುಲ್ಲಾ ಹಾಗೂ ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ 15 ಸ್ಥಾನ ಗೆದ್ದಿತ್ತು.
ಕಳೆದ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಹಾಗೂ ಪಿಡಿಪಿ ಮೈತ್ರಿ ಸರ್ಕಾರ ರಚನೆ ಗೊಂಡಿತ್ತು. ತದ್ವಿರುದ್ದ ಸಿದ್ಧಾಂತಗಳ ಸರ್ಕಾರ ಕಲ್ಲು ಮುಲ್ಲಿನ ಹಾದಿಯಲ್ಲಿ ಸಾಗಿತ್ತು. ಆದರೆ 2019, ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರವನ್ನ ವಿಂಗಡನೆ ಮಾಡಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿತ್ತು. ಬಳಿಕ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿತ್ತು.
ವಕ್ಫ್ ತಿದ್ದುಪಡಿ ಸೇರಿ ಮಹತ್ವದ ಮಸೂದೆ ಅಂಗೀಕಾರ ಇನ್ನು ಮೋದಿ ಸರ್ಕಾರಕ್ಕೆ ಸುಲಭ!