
ನವದೆಹಲಿ(ಮಾ.18) ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಇದೀಗ ಪ್ರತಿ ರಾಜ್ಯದ ಮೇಲೂ ಹದ್ದಿನ ಕಣ್ಮಿಟ್ಟಿದೆ. ನೀತಿ ಸಂಹಿತೆ ಪಾಲನೆಯಾಗದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಸೂಚಿಸಿದೆ. ಇದೇ ವೇಳೆ ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕರನ್ನು ವರ್ಗಾವಣೆಗೊಳಿಸಲು ಚುನಾವಣಾ ಆಯೋಗ ಆದೇಶ ನೀಡಿದೆ. ಇದರ ಜೊತೆಗೆ ಕೆಲ ಹಿರಿಯ ಅಧಿಕಾರಿಗಳನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಆದೇಶಿಸಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳೆಗಿಳಿಯಲು ಸೂಚಿಸಿದೆ. ಮಿಜೋರಾಮ್ ಹಾಗೂ ಹಿಮಾಚಲ ಪ್ರದೇಶದ ಹೆಚ್ಚುವರಿ ಕಾರ್ಯದರ್ಶಿಗಳನ್ನೂ ಹುದ್ದೆಯಿಂದ ಕೆಳಗಿಳಿಯಲು ಸೂಚಿಸಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಕಮಿಷನರ್ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಆಯೋಗ ಸೂಚಿಸಿದೆ.
Electoral Bonds: ಎಸ್‌ಬಿಐ ನೀಡಿದ ಬಾಂಡ್ ವಿವರ..ಚುನಾವಣಾ ಆಯೋಗ ಪ್ರಕಟ: ಹೆಚ್ಚು ದೇಣಿಗೆ ಪಡೆದ ಪಕ್ಷಗಳು ಯಾವು?
ಚುನಾವಣಾ ಆಯೋಗ ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ಘೋಷಿಸಿದೆ. ಏಪ್ರಿಲ್ 19 ರಿಂದ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಸರಿಯಾಗಿ ಒಂದು ತಿಂಗಳಿಗೆ ಲೋಕಸಭಾ ಚುನಾವಣೆ ಮತದಾನ ಆರಂಭಗೊಳ್ಳಲಿದೆ. ಇದಕ್ಕೂ ಮೊದಲೇ ಸುಗಮ ಮತದಾನ, ನ್ಯಾಯಸಮ್ಮತ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.
ಸುಗಮ ಮತದಾನಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಆಯಾ ರಾಜ್ಯ ಚುನಾವಣಾ ಆಯೋಗಗಳಿಗೆ ಕೇಂದ್ರ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಇದರಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಭದ್ರತಾ ಪಡೆಗಳ ನಿಯೋಜನೆ, ವಾಹನ ತಪಾಸಣೆ ಕಾರ್ಯಗಳು ಬಿಗಿಯಾಗಿ ನಡೆಯುತ್ತಿದೆ. ಈಗಾಗಲೇ ಹಲವು ನಗದು ಹಣಗಳನ್ನು ಜಪ್ತಿ ಮಾಡಲಾಗಿದೆ.
18ನೇ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಎಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತದಲ್ಲಿ ಮತದಾನ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 26 ಹಾಗೂ ಮೇ.7 ರಂದು ಚನಾವಣೆ ನಡೆಯಲಿದೆ. ಇನ್ನೂ ಜೂನ್ 4 ರಂದು ಫಲಿತಾಂಶ ಘೋಷಣೆಯಾಗಲಿದೆ.
ಲೋಕಸಭಾ ಚುನಾವಣೆ ಬೆನ್ನಲ್ಲೇ, ಇಡಿ ಸುಳಿಯಲ್ಲಿ ವಿಪಕ್ಷಗಳ ಪ್ರಮುಖ ನಾಯಕರು! ಯಾರ‍್ಯಾರು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ