
ನವದೆಹಲಿ (ಮೇ.12): ಪಂಚರಾಜ್ಯ ಚುನಾವಣೆ ಮುಕ್ತಾಯ ಬೆನ್ನಲ್ಲೇ ಚುನಾವಣಾ ಆಯೋಗ ಮೂರನೇ ಹಂತದ ಮತಪಟ್ಟಿ ಪರಿಷ್ಕರಣೆಗೆ ಸಜ್ಜಾಗಿದೆ.
ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಪಟ್ಟಿ ಪರಿಷ್ಕರಣೆಗೆ ಆಯೋಗ ಸಿದ್ಧತೆ ನಡೆಸಿದೆ. ಇತ್ತೀಚಿಗೆ ಚುನಾವಣೆ ಎದುರಿಸಿದ ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ, ಪಶ್ಚಿಮ ಬಂಗಾಳ ಸೇರಿ 10 ರಾಜ್ಯಗಳಲ್ಲಿ ಮೊದಲೆರೆಡು ಹಂತಗಳಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸಿತ್ತು.
ಈಗ ಮೂರನೇ ಹಂತವಾಗಿ ಕರ್ನಾಟಕ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಜಮ್ಮುಕಾಶ್ಮೀರ, ಹರ್ಯಾಣ, ತೆಲಂಗಾಣ ಸೇರಿ 22 ರಾಜ್ಯಗಳಿಗೆ ನಡೆಯಲಿದೆ. ಇಲ್ಲಿ 40 ಕೋಟಿ ಮತದಾರರು ಪರಿಷ್ಕರಣೆಗೆ ಒಳಪಡಲಿದ್ದಾರೆ.
ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಂಗಾಳದಲ್ಲಿ SIR ಗೆ ಸೋತ ಮೇಡಂ; ರಾಜ್ಯದಲ್ಲಿ 'ಕೈ' ಅಲರ್ಟ್!
ರಾಜ್ಯದಲ್ಲಿ ಎಸ್‌ಐಆರ್ ಯಾವಾಗ ಶುರು? ಮತಪಟ್ಟಿ ವಿಶೇಷ ಪರಿಷ್ಕರಣೆಗೆ ಆಯೋಗ ಸಜ್ಜು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ