ನವದೆಹಲಿ(ಜು.02): ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಮರ ತಾರಕಕ್ಕೇರಿದೆ. ಬಂಗಳಾದಲ್ಲಿನ ಹಿಂಸಾಚಾರ, ಗಲಭೆ ವಿರುದ್ಧ ಕೆಂಡಾಮಂಡಲವಾಗಿರುವ ರಾಜ್ಯಪಾಲ ಜಗದೀಪ್ ಧನ್ಕರ್, ಸರ್ಕಾರಕ್ಕೆ ದೊಡ್ಡ ಕಂಟಕವಾಗಿ ಪರಿಣಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ಹಾಗೂ ಹಿಂದೂಗಳ ರಕ್ಷಣೆ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ( PIL) ವಿಚಾರಣೆಗೆ ಸುಪ್ರೀಂ ಕೋರ್ಟ್ ಮುಂದಾಗಿದೆ.
ದೀದಿಗೆ ಆತಂಕ; ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಕುರಿತು ಕೇಂದ್ರದ ಅಭಿಪ್ರಾಯ ಕೇಳಿದ ಕೋರ್ಟ್!.
ಫಲಿತಾಂಶದ ಬಳಿಕ ನಡೆದ ಹಿಂಸಾಚಾರದಲ್ಲಿ ಬಂಗಾಳದ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿತ್ತು. ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂದೂಗಳು, ಬಿಜೆಪಿ ಕಾರ್ಯಕರ್ತರು ನಾಯಕರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಘಟನೆ ದೇಶದಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆ ಉಲ್ಲೇಖಿಸಿ, ಬಂಗಾಳದಲ್ಲಿ ಹಿಂದೂಗಳ ರಕ್ಷಿಸಬೇಕು ಎಂದು ಕೋರಿ PIL ಸಲ್ಲಿಸಲಾಗಿತ್ತು. ಇದೀಗ ಈ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಮುಂದಾಗಿದೆ.
ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ? ರಾಜ್ಯಪಾಲರ ದೆಹಲಿ ಭೇಟಿ ಮಧ್ಯೆ ಜೋರಾದ ಮಾತು!.
ಅರ್ಜಿ ವಿಚಾರಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್, ಈ ಘಟನೆ ಕುರಿತು ಪಶ್ಚಿಮ ಬಂಗಾಳ ಸರ್ಕಾರ, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಜಸ್ಟೀಸ್ ವಿನೀತ್ ಸರನ್ ಹಾಗೂ ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠ ನೋಟಿಸ್ ನೀಡಿದೆ. ಹಿಂಸಾಚಾರದ ಹಿಂದೆ ಸಿಎಂ ಮಮತಾ ಬ್ಯಾನರ್ಜಿ ಕೈವಾಡವಿದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಮಮತಾ ಬ್ಯಾನರ್ಜಿಯಿಂದ ಉತ್ತರ ಪಡೆಯಲು ಕೋರ್ಟ್ ನಿರಾಕರಿಸಿದೆ.
ಹಿಂದೂ ರಕ್ಷಣಾ ವೇದಿಕೆಯ ರಂಜನ್ ಅಗ್ನಿಹೋತ್ರಿ ಹಾಗೂ ಜೀತೇಂದ್ರ ಸಿಂಗ್ ಈ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ತಕ್ಷಣ ಮಧ್ಯ ಪ್ರವೇಶಿಸಿ, ಬಂಗಾಳದಲ್ಲಿನ ಹಿಂದೂಗಳನ್ನು ರಕ್ಷಿಸಬೇಕು. ಟಿಎಂಸಿ ಹಾಗೂ ಮಮತಾ ಬ್ಯಾನರ್ಜಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ. ಎಚ್ಚೆತ್ತುಕೊಳ್ಳದಿದ್ದರ, 1990ರ ದಶಕಗಲ್ಲಿ ಕಾಶ್ಮೀರದಲ್ಲಿ ಹಿಂದೂಗಳು ಎದುರಿಸಿದ ಪರಿಸ್ಥಿತಿ ಬಂಗಾಳದಲ್ಲಿ ಪುನಾರವರ್ತನೆ ಆಗಲಿದೆ ಎಂದು PILನಲ್ಲಿ ಉಲ್ಲೇಖಿಸಲಾಗಿದೆ.
ಬಂಗಾಳದಲ್ಲಿ ರಾಜ್ಯಪಾಲರ ಕಾರಿಗೇ ತಡೆ, ಕಪ್ಪು ಬಾವುಟ ಪ್ರದರ್ಶನ!
ವ್ಯವಸ್ಥಿತವಾಗಿ ಹಿಂದೂಗಳನ್ನು ಬಂಗಾಳದಿಂದ ಹೊರದಬ್ಬು ಕೆಲಸ ನಡೆಯುತ್ತಿದೆ. ಹೀಗೆ ಮುಂದುವರಿದರೆ, ಬಂಗಾಳದಲ್ಲಿ ಹಿಂದೂಗಳೇ ನಿರಾಶ್ರಿತರಾಗಲಿದ್ದಾರೆ ಎಂದು ಎಚ್ಚರಿಸಲಾಗಿದೆ. ಚುನಾವಣೆ ಗೆಲುವಿನ ಸಂಭ್ರಮಾಚಾರಣೆ ಹೆಸರಿನಲ್ಲಿ ಟಿಎಂಸಿ ಗೂಂಡಾಗಳು ಹಿಂಸಾಚಾರ ನಡೆಸಿದ್ದಾರೆ. ಹಿಂದೂಗಳ ಮೇಲೆ ನಿರಂತರ ಹಲ್ಲೆ, ದಾಳಿ ನಡೆಯುತ್ತಿದೆ. ಹೀಗಾಗಿ ಹಿಂದೂಗಳು ಅಸ್ಸಾಂಗೆ ವಲಸೆ ಹೋಗುತ್ತಿದ್ದಾರೆ. ಇದೇ ಪರಿಸ್ಥಿತಿ 1990ರಲ್ಲಿ ಕಾಶ್ಮೀರದ ಹಿಂದೂಗಳು ಅನುಭವಿಸಿದ್ದಾರೆ. ಇದೀಗ ಕಾಶ್ಮೀರದಲ್ಲಿ ಹಿಂದೂಗಳೇ ಇಲ್ಲದಂತಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.