Electric Highways: ಶೀಘ್ರದಲ್ಲೇ ದೇಶದಲ್ಲಿ ಸೌರಶಕ್ತಿ ಚಾಲಿತ ಹೆದ್ದಾರಿಗಳ ಅಭಿವೃದ್ಧಿ: ನಿತಿನ್ ಗಡ್ಕರಿ

Published : Sep 12, 2022, 03:27 PM IST
Electric Highways: ಶೀಘ್ರದಲ್ಲೇ ದೇಶದಲ್ಲಿ ಸೌರಶಕ್ತಿ ಚಾಲಿತ ಹೆದ್ದಾರಿಗಳ ಅಭಿವೃದ್ಧಿ: ನಿತಿನ್ ಗಡ್ಕರಿ

ಸಾರಾಂಶ

ವಿದ್ಯುತ್‌ ಮೂಲಕ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಬಯಸಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. 

ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು (Electric Highways) ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆಯಂತೆ. ಈ ಹೆದ್ದಾರಿಗಳ ಮೂಲಕ ಹೆವಿ ಡ್ಯೂಟಿ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (Indo - American Chambers of Commerce) (IACC) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿತಿನ್‌ ಗಡ್ಕರಿ, ಕೆಂದ್ರ ಸರ್ಕಾರವು ವಿದ್ಯುತ್‌ ಮೂಲಕ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಬಯಸುತ್ತದೆ ಎಂದೂ ತಿಳಿಸಿದರು.

ಅಲ್ಲದೆ, ವಿದ್ಯುತ್ ಚಲನಶೀಲತೆಗಾಗಿ ಸೌರ ಮತ್ತು ಪವನ ಶಕ್ತಿ ಆಧಾರಿತ ಚಾರ್ಜಿಂಗ್ ಕಾರ್ಯವಿಧಾನಗಳನ್ನು ಕೇಂದ್ರ ಸರ್ಕಾರವು ಬಲವಾಗಿ ಪ್ರೋತ್ಸಾಹಿಸುತ್ತಿದೆ. ನಾವು ಸೌರಶಕ್ತಿಯಿಂದ ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲು ಸಹ ಕೆಲಸ ಮಾಡುತ್ತಿದ್ದೇವೆ ಮತ್ತು ಇದು ಚಾಲನೆಯಲ್ಲಿರುವಾಗ ಹೆವಿ ಡ್ಯೂಟಿ ಟ್ರಕ್‌ಗಳು ಹಾಗೂ ಬಸ್‌ಗಳನ್ನು ಚಾರ್ಜ್ ಮಾಡಲು ಅನುಕೂಲವಾಗುತ್ತದೆ" ಎಂದೂ ಕೆಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದರು. 

ಸೀಟ್‌ಬೆಲ್ಟ್ ಅಲಾರಂ ನಿಷ್ಕ್ರಿಯಗೊಳಿಸುವ ಸಾಧನಗಳ ಮಾರಾಟ ನಿಲ್ಲಿಸಲು Amazonಗೆ ಕೇಂದ್ರ ಸರ್ಕಾರ ಸೂಚನೆ

ನೀವು ಸಾಮಾನ್ಯ ಹೆದ್ದಾರಿಗಳಲ್ಲಿ ಪ್ರಯಾಣಿಸಿರುತ್ತೀರಾ..? ಆದರೆ, ಎಲೆಕ್ಟ್ರಿಕ್ ಹೆದ್ದಾರಿ ಅಂದರೆ ಏನು ಅಂತೀರಾ..?  ಹೆದ್ದಾರಿ ರಸ್ತೆ ಮೇಲೆ ಪ್ರಯಾಣಿಸುವ ವಾಹನಗಳಿಗೆ ವಿದ್ಯುತ್ ಸರಬರಾಜು ಮಾಡುತ್ತದೆ. ಹಾಗೂ, ಓವರ್‌ಹೆಡ್ ಪವರ್ ಲೈನ್‌ಗಳನ್ನು ಸಹ ಈ ಹೈವೇ ರೋಡ್‌ ಒಳಗೊಂಡಿರುತ್ತದೆ. ಇದರ ಜತೆಗೆ, ಟೋಲ್ ಪ್ಲಾಜಾಗಳನ್ನು (Toll Plazas) ಸಹ ಸೌರಶಕ್ತಿಯಿಂದ ಚಾಲಿತಗೊಳಿಸಲು ಕೇಂದ್ರ ಸರ್ಕಾರವು ಪ್ರೋತ್ಸಾಹಿಸುತ್ತಿದೆ ಎಂದೂ ನಿತಿನ್‌ ಗಡ್ಕರಿ ಹೇಳಿದರು. ರಸ್ತೆ ಸಚಿವಾಲಯವು ಪ್ರಮುಖ ಕಾರಿಡಾರ್‌ಗಳಲ್ಲಿ ರೂಟ್‌ ಆಪ್ಟಿಮೈಸೇಶನ್ ನಡೆಸುತ್ತದೆ ಮತ್ತು ಹೊಸ ಜೋಡಣೆಯನ್ನು ವಿನ್ಯಾಸಗೊಳಿಸಿದೆ ಎಂದೂ ಕೇಂದ್ರ ಸಾರಿಗೆ ಸಚಿವರು ಹೇಳಿದರು.

ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮೂಲಸೌಕರ್ಯವು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ, ಹೊಸ ವ್ಯವಹಾರಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತದ. ಅಲ್ಲದೆ, ನಾವು 26 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುತ್ತಿದ್ದೇವೆ ಎಂದು ನಿತಿನ್‌ ಗಡ್ಕರಿ ಹೇಳಿದರು. ಈ ಮಧ್ಯೆ, ಪ್ರಧಾನಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಪ್ರಾರಂಭವಾಗಿದ್ದು, ಈ ಹಿನ್ನೆಲೆ ಇನ್ಮುಂದೆ ಯೋಜನೆಗಳು ವೇಗವಾಗಿ ಅನುಮತಿ ಪಡೆಯುತ್ತವೆ ಮತ್ತು ಇದು ಲಾಜಿಸ್ಟಿಕ್ ವೆಚ್ಚವನ್ನು ಕಡಿತಗೊಳಿಸುತ್ತದೆ ಎಂದೂ ಹೇಳಿದರು.

ಅಮೆರಿಕ ಹೂಡಿಕೆದಾರರಿಗೆ ಗಡ್ಕರಿ ಆಹ್ವಾನ
ಭಾರತ ಮತ್ತು ಯುಎಸ್ ಎರಡೂ ನೈಸರ್ಗಿಕ ಪಾಲುದಾರರು ಎಂದು ಹೇಳಿದ ಕೆಂದ್ರ ಸಚಿವ ನಿತಿನ್‌ ಗಡ್ಕರಿ, ಭಾರತದ ಲಾಜಿಸ್ಟಿಕ್ಸ್, ರೋಪ್‌ವೇಗಳು ಮತ್ತು ಕೇಬಲ್ ಕಾರ್ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಯುಎಸ್ ಖಾಸಗಿ ಹೂಡಿಕೆದಾರರನ್ನು ಆಹ್ವಾನಿಸಿದರು. ಈ ಮಧ್ಯೆ, ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಸುಮಾರು 3 ಕೋಟಿ ಮರಗಳನ್ನು ನೆಡಲಾಗುವುದು ಮತ್ತು ಹೆದ್ದಾರಿಗಳ ನಿರ್ಮಾಣ ಹಾಗೂ ವಿಸ್ತರಣೆಯ ಸಂದರ್ಭದಲ್ಲಿ ಮೋದಿ ಸರ್ಕಾರವು ಮರ ನೆಡುವ ಪದ್ಧತಿಯನ್ನು ಅಳವಡಿಸಿಕೊಳ್ಳುತ್ತಿದೆ. ಮತ್ತು ಇಲ್ಲಿಯವರೆಗೆ ನಾವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ 27,000 ಮರಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದೇವೆ" ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದರು. 

ಹೆದ್ದಾರಿ ಸುರಕ್ಷತೆಗೆ ಕೇಂದ್ರ ಬದ್ಧ, ಕಾರುಗಳಲ್ಲಿ 6 ಏರ್‌ಬ್ಯಾಗ್ ಕಡ್ಡಾಯ: ಶೀಘ್ರದಲ್ಲೇ ಕಾನೂನು: ನಿತಿನ್‌ ಗಡ್ಕರಿ

ಮರ ಕಡಿಯಲು ಮತ್ತು ಮರ ನೆಡಲು ಸರ್ಕಾರವು ‘ಟ್ರೀ ಬ್ಯಾಂಕ್’ ಎಂಬ ಹೊಸ ನೀತಿಯನ್ನು ರೂಪಿಸುತ್ತಿದೆ ಎಂದೂ ನಿತಿನ್‌ ಗಡ್ಕರಿ ಹೇಳಿದ್ದಾರೆ. ಮರ ಕಡಿಯಲು ಮತ್ತು ಮರ ನೆಡಲು ಸರ್ಕಾರವು ‘ಟ್ರೀ ಬ್ಯಾಂಕ್’ ಎಂಬ ಹೊಸ ನೀತಿಯನ್ನು ರೂಪಿಸುತ್ತಿದೆ. ಈ ನೀತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ನಂತಹ ಅಧಿಕಾರಿಗಳು ಯೋಜನೆಯ ಅಭಿವೃದ್ಧಿಯ ಸಮಯದಲ್ಲಿ ಮರಗಳನ್ನು ನೆಡುವ ಟ್ರೀ ಬ್ಯಾಂಕ್ ಖಾತೆಯನ್ನು ನಿರ್ವಹಿಸಬೇಕಾಗುತ್ತದೆ ಎಂದು ತಿಳಿದುಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್