ಸೈಬರ್ ಕ್ರೈಂ ಇದೀಗ ವೈರಸ್ ರೀತಿ ಹೊಸ ಹೊಸ ರೂಪಾಂತರಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಅಂತ್ಯಸಂಸ್ಕಾರ ಸೈಬರ್ ಕ್ರೈಂ ಶುರುವಾಗಿದೆ. ನೀವು ಆಪ್ತರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡ ನೋವಿನಲ್ಲೇ ಸೈಬರ್ ವಂಚಕರ ಕೈ ಸಿಲುಕಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿರಿ. ಏನಿದು ಹೊಸ ಅಂತ್ಯಸಂಸ್ಕಾರ ಸೈಬರ್ ಕ್ರೈಂ?
ನವೆಹಲಿ(ನ.22) ಸೈಬರ್ ಕ್ರೈಂ ಭೂತ ಇದೀಗ ಯಾವ ರೂಪದಲ್ಲಿ ವಕ್ಕರಿಸಲಿದೆ ಅನ್ನೋದೇ ಗೊತ್ತಾಗಲ್ಲ. ಮೋಸ ಹೋದ ಬಳಿಕವಷ್ಟೇ ಇದೊಂದು ಸೈಬರ್ ಕ್ರೈಂ ಆಗಿತ್ತು ಅನ್ನೋದು ಅರಿವಾಗೋದು. ಹೀಗಾಗಿ ಅತೀವ ಎಚ್ಚರ ವಹಿಸಬೇಕು. ಪ್ರತಿ ಗಂಟೆಯಲ್ಲಿ ಲಕ್ಷಾಂತರ ಸೈಬರ್ ಕ್ರೈಂ ಪ್ರಕರಣಗಳು ಪತ್ತೆಯಾಗುತ್ತಿದೆ, ದೂರು ದಾಖಲಾಗುತ್ತಿದೆ. ಪ್ರತಿ ದಿನ ಹೊಸ ಹೊಸ ವಿಧಾನದಲ್ಲಿ ವಂಚಕರು ಮೋಸ ಮಾಡುತ್ತಿದ್ದಾರೆ. ಅಮಾಯಕರು, ಎಚ್ಚರವಹಿಸಿ ಹೆಜ್ಜೆ ಇಟ್ಟವರೂ ಇದಕ್ಕೆ ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ವೆಡ್ಡಿಂಗ್ ಕಾರ್ಡ್ ಸೈಬರ್ ಕ್ರೈಂ ಕೇಳಿರುತ್ತಿರಿ, ಇದೀಗ ಅಂತ್ಯಸಂಸ್ಕಾರ ಸೈಬರ್ ಕ್ರೈಂ ಪತ್ತೆಯಾಗಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ನೋವಿನಲ್ಲಿರುವಾಗಲೇ ನೀವು ಟಾರ್ಗೆಟ್ ಆಗುತ್ತೀರಿ. ಒಂದು ಸಣ್ಣ ತಪ್ಪು ಆಪ್ತರ ಕಳೆದುಕೊಂಡ ನೋವಿನ ಬೆನ್ನಲ್ಲೇ ಮತ್ತಷ್ಟು ಆಘಾತಗಳನ್ನು ನೀಡಲಿದೆ.
ಇದು ಭಾವನೆ, ನೋವು, ದುಃಖಗಳನ್ನೇ ಟಾರ್ಗೆಟ್ ಮಾಡಿ ವಂಚಕರು ನಡೆಸುವ ಹೊಸ ಸೈಬರ್ ಕ್ರೈಂ. ಹೆಚ್ಚಾಗಿ ನಗರ ಪ್ರದೇಶಗಳಲ್ಲಿ, ಪಟ್ಟಣ ಪ್ರದೇಶಗಳಲ್ಲೇ ಈ ಸೈಬರ್ ಕ್ರೈಂ ನಡೆಯುತ್ತದೆ. ನಗರ ಪ್ರದೇಶಗಳಲ್ಲಿನ ಬದುಕಿಗೆ ಸಮಯವಿಲ್ಲ. ಎಲ್ಲವನ್ನೂ ನಿಭಾಯಿಸಲು, ನಿರ್ವಹಿಸಲು ಆಪ್ತರು, ನೆರಮನೆಯವರ ಸಹಾಯವಿರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಕೆಲ ಹೊಣೆಗಾರಿಕೆಯನ್ನು ಎಜೆನ್ಸಿಗಳ ಕೈಗೆ, ಅಥವಾ ಇದನ್ನೇ ಉದ್ಯಮವಾಗಿ ತೊಡಗಿಸಿಕೊಂಡವರಿಗೆ ವಹಿಸುತ್ತೇವೆ. ಈ ಪೈಕಿ ಅಂತ್ಯಸಂಸ್ಕಾರ ನಡೆಸಲು ನಗರ ಪ್ರದೇಶದಲ್ಲಿ ಖಾಸಗಿ ಎಜೆನ್ಸಿಗಳಿವೆ. ಈ ಎಜೆನ್ಸಿಗಳು ನಿಮ್ಮ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸುತ್ತದೆ. ಅಂತಿಮ ವಿಧಿ ವಿಧಾನಗಳು, ಪೂಜಾ ಕೈಂಕರ್ಯ, ಎಲ್ಲವನ್ನೂ ಅಚ್ಚುಕಟ್ಟಾಗಿ ಮಾಡುತ್ತದೆ. ಇಲ್ಲಿ ಸೈಬರ್ ಕ್ರೈಂ ಹೇಗೆ ನಡೆಯುತ್ತೆ?
undefined
ವ್ಯಾಟ್ಸಾಪ್ ಮೂಲಕ ಮದುವೆ ಆಮಂತ್ರಣ ಬಂದಿದೆಯಾ? ಹೊಸ ವೆಡ್ಡಿಂಗ್ ಸೈಬರ್ ಸ್ಕ್ಯಾಮ್ ಪತ್ತೆ!
ಏನಿದು ಅಂತ್ಯಸಂಸ್ಕಾರ ಸೈಬರ್ ಕ್ರೈಂ
ಈ ರೀತಿ ಅಂತ್ಯಸಂಸ್ಕಾರ ನಡೆಸುವ ಹಲವು ಎಜೆನ್ಸಿಗಳ ಜಾಹೀರಾತು, ನಂಬರ್ ಸುಲಭವಾಗಿ ಸಿಗುತ್ತದೆ. ಹೀಗೆ ನೀವು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಎಜೆನ್ಸಿಗೆ ಕರೆ ಮಾಡಿ ಅಂತ್ಯಸಂಸ್ಕಾರಕ್ಕೆ ನಡೆಸಬೇಕು ಎಂದು ಕೇಳಿಕೊಂಡರೆ ತಕ್ಷಣವೇ ನಿಮ್ಮ ಮಾಹಿತಿ ಪಡೆದು ಲಿಂಕ್ ಕಳುಹಿಸಿದ್ದಾರೆ. ಈ ಲಿಂಕ್‌ನಲ್ಲಿ ನೀವು ನಿಮ್ಮ ಹೆಸರು ವಿಳಾಸ, ಮೃತಪಟ್ಟವರ ಹೆಸರು, ಧರ್ಮ, ಗೋತ್ರ, ಅಂತ್ಯಸಂಸ್ಕಾರ ಸಂಪ್ರದಾಯದ ಬಗ್ಗೆ ಮಾಹಿತಿ ನೀಡಬೇಕು. ಬಳಿಕ 5,000 ರೂಪಾಯಿ ಅಥವಾ ಅಡ್ವಾನ್ಸ್ ಮೊತ್ತವನ್ನು ಪಾವತಿಸಬೇಕು. ತಕ್ಷಣವೇ ನಿಮಗೆ ಮೆಸೇಜ್ ಬರಲಿದೆ. ಅಂತ್ಯಸಂಸ್ಕಾರ ನಡೆಸುವ ಪೂಜಾರಿ ಹೆಸರು, ಘಳಿಗೆ ಸೇರಿದಂತೆ ಎಲ್ಲದರ ಕರ್ಮಫೇಶನ್ ಮೆಸೇಜ್ ಬರಲಿದೆ. ಇದೇ ವೇಳೆ ಒಟಿಪಿಯೊಂದು ಬರಲಿದೆ. ಈ ಒಟಿಪಿಯನ್ನು ಎಜೆನ್ಸಿ ಮಂದಿ ಕೇಳುತ್ತಾರೆ. ಇದಕ್ಕೆ ಹಲವು ಕಾರಣಗಳನ್ನು ನೀಡುತ್ತಾರೆ.
ನೀವು ಎಲ್ಲವೂ ಅಚ್ಚುಕಟ್ಟಾಗಿ ಆಗಲಿ ಎಂದ ನೋವಿನಿಂದಲೇ ಒಟಿಪಿ ಹಂಚಿಕೊಂಡರೆ ಕತೆ ಮುಗೀತು. ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣ ಮಾಯವಾಗಲಿದೆ. ಇಲ್ಲಿ ಮತ್ತೊಂದು ಎಚ್ಚರವಹಿಸಬೇಕು. ನಿಮ್ಮಲ್ಲಿ ಒಟಿಪಿ ಕೇಳದೆಯೂ ವಂಚನೆ ನಡೆಯುತ್ತದೆ. ವಂಚಕರು ಹಂಚಿಕೊಂಡ ಲಿಂಕ್ ಕ್ಲಿಕ್ ಮಾಡಿದರೆ ಸಾಕು ಮಾಲ್‌ವೇರ್ ವೈರಸ್ ನಿಮ್ಮ ಫೋನ್ ಸೇರಿಕೊಳ್ಳಲಿದೆ. ಇದರಿಂದ ನಿಮ್ಮ ಫೋನ್‌ನ ವೈಯುಕ್ತಿಕ ಮಾಹಿತಿ ಸೋರಿಕೆ ಮಾಡಿ ಬಳಿಕ ಬ್ಯಾಂಕ್ ಖಾತೆಯಿಂದ ಹಣ ಎಗರಿಸುತ್ತಾರೆ.
ಅಂತ್ಯಸಂಸ್ಕಾರವನ್ನೇ ಟಾರ್ಗೆಟ್ ಮಾಡಿ ಹಲವು ಸೈಬರ್ ಕ್ರೈಂ ದಾಖಲಾಗಿದೆ. ಈ ಕುರಿತು ಎಚ್ಚರಿಕೆ ಸಂದೇಶ ನೀಡುವ ವಿಡಿಯೋಗಳು ಹರಿದಾಡುತ್ತಿದೆ. ಪ್ರತಿ ವ್ಯವಹಾರಕ್ಕೂ ಮುನ್ನ ಯೋಚಿಸಿ, ತಾಳ್ಮೆ ವಹಿಸಿ. ಯಾವುದೇ ಕಾರಣಕ್ಕೂ ಅನಾಮಿಕರು ಕಳುಹಿಸುವ ಯಾವುದೇ ಲಿಂಕ್ ಕ್ಲಿಕ್ ಮಾಡಬೇಡಿ. ಒಟಿಪಿ ಎಂದಿಗೂ ಯಾರೊಂದಿಗೂ ಹಂಚಿಕೊಳ್ಳಬೇಡಿ.
SBI ಬ್ಯಾಂಕ್‌ನಲ್ಲಿ ಖಾತೆ ಇದೆಯಾ? ನಿಮಗೆ ಈ ಸಂದೇಶ ಬಂದರೆ ಅಪ್ಪಿ ತಪ್ಪಿ ಓಪನ್ ಮಾಡಬೇಡಿ!