ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು

Published : Dec 11, 2025, 02:58 PM IST
Telangana Engineering Student Killed By Girlfriend's Family

ಸಾರಾಂಶ

ಮದುವೆ ಬಗ್ಗೆ ಮಾತುಕತೆ ನಡೆಸುವುದಾಗಿ ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಆತನ ಗರ್ಲ್‌ಫ್ರೆಂಡ್ ಮನೆಯವರೇ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದಂತಹ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಸಂಗಾರೆಡ್ಡಿ : ಮದುವೆ ಬಗ್ಗೆ ಮಾತುಕತೆ ನಡೆಸುವುದಾಗಿ ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಆತನ ಗರ್ಲ್‌ಫ್ರೆಂಡ್ ಮನೆಯವರೇ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದಂತಹ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಯುವತಿಯ ಪೋಷಕರ ವಿರೋಧದ ನಡುವೆಯೂ ಯುವತಿ ಜೊತೆಗೆ ಪ್ರೀತಿ ಮುಂದುವರಸಿದ್ದೆ ಈ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.

2ನೇ ವರ್ಷದ ಬಿಟೆಕ್ ಓದುತ್ತಿದ್ದ ಜ್ಯೋತಿ ಶ್ರವಣ್ ಸಾಯಿ ಮೃತಪಟ್ಟ ವಿದ್ಯಾರ್ಥಿ. ಈ ವಿದ್ಯಾರ್ಥಿ ಶ್ರವಣ್ ಮೈಸಮ್ಮಗುಡ್ಡದ ಸೇಂಟ್ ಪೀಟರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ಕುತಾಬುಲ್ಲಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾ ಎಂಜಿನಿಯರಿಂಗ್ ಓದುತ್ತಿದ್ದ.

ಇದನ್ನೂ ಓದಿ: ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ

ಈತನಿಗೆ ಬೀರಂಗುಡಾದ ಇಸುಕಬಾವಿಯ ನಿವಾಸಿಯಾಗಿದ್ದ 19 ವರ್ಷದ ಶ್ರೀಜಾ ಎಂಬ ಯುವತಿಯೊಂದಿಗೆ ಪ್ರೇಮ ಸಂಬಂಧವಿತ್ತು. ಆದರೆ ಈ ಪ್ರೇಮ ಸಂಬಂಧಕ್ಕೆ ಶ್ರೀಜಾ ಪೋಷಕರಿಂದ ತೀವ್ರ ವಿರೋಧವಿತ್ತು. ಶ್ರೀಜಾಳಿಂದ ದೂರವಿರುವಂತೆ ಆಕೆಯ ಜೊತೆಗಿನ ಸಂಬಂಧವನ್ನು ತೊರೆಯುವಂತೆ ಶ್ರೀಜಾಳ ಪೋಷಕರು ಹಲವು ಬಾರಿ ಶ್ರವಣ್ ಸಾಯಿಗೆ ಈ ಹಿಂದೆಯೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೂ ಪೋಷಕರ ತೀವ್ರ ವಿರೋಧದ ನಡುವೆಯೂ ಇವರ ನಡುವಿನ ಸಂಬಂಧ ಮುಂದುವರೆದಿತ್ತು ಎಂದು ಅಮೀನಾಪುರದ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ಹೇಳಿದ್ದಾರೆ.

ಈ ನಡುವೆ ಘಟನೆ ನಡೆದಂದು ಶ್ರೀಜಾಳ ಪೋಷಕರು ಶ್ರವಣ್‌ನನ್ನು ಮದುವೆ ಮಾತುಕತೆ ನಡೆಸುವುದಾಗಿ ಹೇಳಿ ಮನೆಗೆ ಕರೆದಿದ್ದಾರೆ. ಆತ ಮನೆಗೆ ಬರುತ್ತಿದ್ದಂತೆ ಶ್ರೀಜಾಳ ತಾಯಿಯೂ ಸೇರಿದಂತೆ ಆಕೆಯ ಕುಟುಂಬದವರು ಶ್ರವಣ್ ಮೇಲೆ ಹಲ್ಲೆ ಮಾಡಿದ್ದಾರೆ. ಕ್ರಿಕೆಟ್‌ ಬ್ಯಾಟ್‌ನಿಂದ ಆತನಿಗೆ ಥಳಿಸಿದ್ದರಿಂದ ಆತನ ತಲೆಗೆ ಗಂಭೀರ ಗಾಯಗಳಾಗಿವೆ. ಆತನ ಕಾಲು ಹಾಗೂ ಪಕ್ಕೆಲುಬುಗಳು ಮುರಿದು ಹೋಗಿವೆ. ಪರಿಣಾಮ ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ. ಹಲ್ಲೆಯ ನಂತರ ಆತನನ್ನು ಕುಕ್ಕಟಪಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಶ್ರವಣ್ ಮೃತಪಟ್ಟಿದ್ದಾನೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:  ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ

ಘಟನೆಗೆ ಸಂಬಂಧಿಸಿದಂತೆ ಅಮೀನ್‌ಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ಹತ್ಯೆಗೆ ಬಳಸಿದ ಕ್ರಿಕೆಟ್ ಬ್ಯಾಟನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಘಟನಾ ಸ್ಥಳವನ್ನು ಮಹಜರು ಮಾಡಿ ಶ್ರವಣ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಈ ದಾಳಿಗೆ ನಿಜವಾದ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಕುಟುಂಬದ ಇತರ ಸದಸ್ಯರು ಭಾಗಿಯಾಗಿರಬಹುದೇ ಎಂಬ ಬಗ್ಗೆ ತನಿಖೆ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ