
ನವದೆಹಲಿ(ಫೆ.27): ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಐದು ರಾಜ್ಯಗಳ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾದ ಎಲ್ಲಾ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ದೇಶಾದ್ಯಂತ ಮತ್ತೊಮ್ಮೆ ಕೊರೋನಾ ಸೋಂಕು ಉಬ್ಬರದ ನಡುವೆಯೇ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆ ವೇಳೆ ಸೋಂಕು ವ್ಯಾಪಕವಾಗಿ ಹಬ್ಬದಂತೆ ಹೆಚ್ಚಿನ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಆನ್‌ಲೈನ್‌ನಲ್ಲೇ ನಾಮಪತ್ರ ಹಾಕಲು ಅವಕಾಶ ನೀಡಲಾಗುತ್ತದೆ. ಜನಸಂದಣಿ ತಪ್ಪಿಸಲು ಮತದಾನದ ಅವಧಿ 1 ತಾಸು ವಿಸ್ತರಿಸಲಾಗುತ್ತದೆ ಎಂದು ಆಯೋಗ ಮುಖ್ಯಸ್ಥ ಸುನೀಲ್ ಆರೋರಾ ಹೇಳಿದರು.
ಮನೆ-ಮನೆ ಪ್ರಚಾರಕ್ಕೆ ಅಭ್ಯರ್ಥಿ ಸೇರಿದಂತೆ ಐದಕ್ಕಿಂತ ಹೆಚ್ಚು ಮಂದಿ ತೆರಳುವಂತಿಲ್ಲ. ಅಲ್ಲದೆ ರೋಡ್ ಶೋಗೆ ಐದಕ್ಕಿಂತ ಹೆಚ್ಚು ವಾಹನಗಳ ಬಳಕೆಗೆ ಅವಕಾಶವಿಲ್ಲ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ