ಪವಾರ್‌, ಶಾ ಗೌಪ್ಯ ಭೇಟಿ: ಅಘಾಡಿ ಸರ್ಕಾರ ಅಳಿವು ಉಳಿವಿನ ಬಗ್ಗೆ ಕುತೂಹಲ!

Published : Mar 29, 2021, 09:04 AM IST
ಪವಾರ್‌, ಶಾ ಗೌಪ್ಯ ಭೇಟಿ: ಅಘಾಡಿ ಸರ್ಕಾರ ಅಳಿವು ಉಳಿವಿನ ಬಗ್ಗೆ ಕುತೂಹಲ!

ಸಾರಾಂಶ

ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಹಫ್ತಾ ವಸೂಲಿ ಆರೋಪ| ಪವಾರ್‌, ಶಾ ಗೌಪ್ಯ ಭೇಟಿ: ಅಘಾಡಿ ಸರ್ಕಾರ ಅಳಿವು ಉಳಿವಿನ ಬಗ್ಗೆ ಕುತೂಹಲ!

ನವದೆಹಲಿ(ಮಾ.29): ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಹಫ್ತಾ ವಸೂಲಿ ಆರೋಪ ಕೇಳಿ ಬಂದಿರುವ ಮಧ್ಯೆಯೇ, ಅಘಾಡಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೌಪ್ಯವಾಗಿ ಮಾತುಕತೆ ನಡೆಸಿರುವುದು ಬಾರೀ ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ಪವಾರ್‌ ಮತ್ತು ಪಕ್ಷದ ಮುಖಂಡ ಪ್ರಫುಲ್‌ ಪಟೇಲ್‌ ಶನಿವಾರ ಅಹ್ಮದಾಬಾದ್‌ನ ಫಾಮ್‌ರ್‍ಹೌಸ್‌ನಲ್ಲಿ ಶಾ ಭೇಟಿಯಾಗಿದ್ದಾರೆ. ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿರುವ ಅಮಿತ್‌ ಶಾ, ‘ಎಲ್ಲವನ್ನೂ ಸಾರ್ವಜನಿಕಗೊಳಿಸಬೇಕಿಲ್ಲ’ ಎಂದಿದ್ದಾರೆ. ಇದು ಮಹಾರಾಷ್ಟ್ರ ಅಘಾಡಿ ಸರ್ಕಾರ ಅಳಿವು ಉಳಿವಿನ ಪ್ರಶ್ನೆಯನ್ನು ಮತ್ತಷ್ಟು ದಟ್ಟವಾಗಿಸಿದೆ.

ಏನಿದು ಹಗರಣ?

- ಮಹಾರಾಷ್ಟ್ರದ ಗೃಹ ಸಚಿವ ಪ್ರತಿ ತಿಂಗಳು 100 ಕೋಟಿ ರು. ಹಫ್ತಾ ಕೇಳುತ್ತಾರೆಂದು ಮುಖ್ಯಮಂತ್ರಿಗೆ ಮುಂಬೈನ ಮಾಜಿ ಪೊಲೀಸ್‌ ಕಮಿಷನರ್‌ ದೂರು

- ಮುಕೇಶ್‌ ಅಂಬಾನಿ ಮನೆ ಮುಂದೆ ಬಾಂಬ್‌ ಇಟ್ಟಅಧಿಕಾರಿಯನ್ನು ಬಳಸಿಕೊಂಡು ಹಫ್ತಾ ವಸೂಲಿ ಮಾಡುತ್ತಿದ್ದ ಆರೋಪ

- ತನಿಖೆಗೆ ಬಿಜೆಪಿ ಬಿಗಿಪಟ್ಟು, ಮೈತ್ರಿ ಸರ್ಕಾರದ ಅಂಗಪಕ್ಷ ಎನ್‌ಸಿಪಿಯಿಂದಲೂ ಬೇಡಿಕೆ

- ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದಲ್ಲಿ ತೀವ್ರ ಸಂಚಲನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ