ರಾಮ ಮಂದಿರ ಉದ್ಘಾಟನೆಗೆ ತಯಾರಿಗಳು ಅಂತಿಮ ಹಂತದಲ್ಲಿದೆ. ಜನವರಿ 22 ರಂದು ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಪೈಕಿ ಯೋಗಿ ಆದಿತ್ಯನಾಥ್‌ಗೆ ಮಾತ್ರ ಆಹ್ವಾನ ನೀಡಲಾಗಿದೆ. ಇನ್ಯಾವುದೇ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಆಹ್ವಾನ ನೀಡುತ್ತಿಲ್ಲ.
ಆಯೋಧ್ಯೆ(ಡಿ.25) ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಭಕ್ತರು ಕಾಯುತ್ತಿದ್ದಾರೆ. 500 ವರ್ಷಗಳ ಸತತ ಹೋರಾಟದ ಬಳಿಕ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣವಾಗಿದೆ. ಜನವರಿ 22 ರಂದು ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಧಾನಿ, ರಾಷ್ಟ್ರಪತಿ, ಸಾಧು ಸಂತರು, ಸ್ವಾಮೀಜಿಗಳು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಆಹ್ವಾನಿಸಲಾಗಿದೆ. ಆದರೆ ಮುಖ್ಯಮಂತ್ರಿಗಳ ಪೈಕಿ ಯೋಗಿ ಆದಿತ್ಯನಾಥ್ ಹೊರತುಪಡಿಸಿದರೆ ಇನ್ಯಾವುದೇ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿಲ್ಲ. ಇಷ್ಟೇ ಅಲ್ಲ ಯಾವುದೇ ರಾಜ್ಯಪಾಲರಿಗೂ ಆಹ್ವಾನ ನೀಡಿಲ್ಲ.
ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರ ನಡುವೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರೂ ಆಗಮಿಸಿದರೆ ಪ್ರೊಟೋಕಾಲ್ ಪಾಲಿಸುವುದು ಕಷ್ಟವಾಗಲಿದೆ. ಭದ್ರತೆ ಹಾಗೂ ಪ್ರೊಟೋಕಾಲ್ ದೃಷ್ಟಿಯಿಂದ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಸಿಲ್ಲ ಎಂದು ರಾಮ ಮಂದಿರ ಜನ್ಮಭೂಮಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!
ರಾಮ ಮಂದಿರ ನಿರ್ಮಾಣ ಸಮಿತಿ, ಉದ್ಘಾಟನೆ ಸಮಿತಿ, ರಾಮ ಮಂದಿರ ಟ್ರಸ್ಟ್ ಸೇರಿದಂತೆ ಹಲವು ಸಮಿತಿಗಳ ಮುಖ್ಯಸ್ಥರಾಗಿರುವ ಯೋಗಿ ಆದಿತ್ಯನಾಥ್ ಮಾತ್ರ ಮುಖ್ಯಮಂತ್ರಿಗಳ ಪೈಕಿ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳತ್ತಾರೆ. ಉತ್ತರ ಪ್ರದೇಶ ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳ್ಳುತ್ತಿರುವ ಕಾರಣ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್‌ರನ್ನು ಆಹ್ವಾನಿಸಲಾಗಿದೆ.
ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಳಿಕ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದೆ.
ರಾಮ ಮಂದಿರ ಉದ್ಘಾಟನೆಗೆ ಸೋನಿಯಾ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್ ನಾಯಕರಿಗೆ ಆಹ್ವಾನ!
ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಯೋಧ್ಯೆಯನ್ನು ಭವ್ಯವಾಗಿ ಅಲಂಕರಿಸಲಾಗುತ್ತಿದೆ. ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.22ರಂದು ಪ್ರಾಣ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅದ್ಧೂರಿ ಲೇಸರ್ ಶೋ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶುಕ್ರವಾರ ಸಂಜೆ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಬಣ್ಣ ಬಣ್ಣದ ಲೇಸರ್‌ನ ಚಿತ್ತಾರದ ಶೋ ನೋಡಿ ಕಣ್ತುಂಬಿಕೊಂಡ ಜನರು ಕೇಕೇ ಹಾಕುತ್ತ ಸಂಭ್ರಮಿಸಿದರು.