
ಪಟನಾ(ಆ.18): ಬಿಹಾರ ಚುನಾವಣೆ ಸಮೀಪಿಸುತ್ತಿರುವಾಗಲೇ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಹಿನ್ನಡೆಯಾಗಿದೆ. ನಿತೀಶ್ ಸಂಪುಟದಲ್ಲಿ ಮಂತ್ರಿಯಾಗಿದ್ದ ಪ್ರಭಾವಿ ದಲಿತ ಮುಖಂಡ ಶ್ಯಾಂ ರಜಕ್ ಅವರು ಮತ್ತೆ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳಕ್ಕೆ (ಆರ್‌ಜೆಡಿ) ಸೋಮವಾರ ಮರಳಿದ್ದಾರೆ.
ಅಸ್ಸಾಂ, ಬಿಹಾರ್ ನೆರೆ ಪರಿಹಾರಕ್ಕೆ ಅಕ್ಷಯ್ ಕುಮಾರ್ ತಲಾ 1 ಕೋಟಿ ನೆರವು
ರಜಕ್ ಪಕ್ಷಾಂತರದ ಸುಳಿವು ಅರಿತಿದ್ದ ನಿತೀಶ್ ಕುಮಾರ್ ಭಾನುವಾರವಷ್ಟೇ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಯುನಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದರು.
ಈ 10 ರಾಜ್ಯಗಳು ಕೊರೋನಾ ಗೆದ್ದರೆ ದೇಶ ಗೆದ್ದಂತೆ: ಪಿಎಂ ಮೋದಿ!
ಸೋಮವಾರ ಆರ್‌ಜೆಡಿ ಸೇರಿದ ರಜಕ್, ‘ನಮ್ಮ ನಾಯಕ ಲಾಲು ಅವರಿಂದ ಕಲಿತ ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತ ತತ್ವಗಳಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ತಿಳಿಸಿದರು. ರಜಕ್ ಈ ಹಿಂದೆ ಆರ್‌ಜೆಡಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. 2009ರಲ್ಲಿ ಜೆಡಿಯು ಸೇರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ