ಮೋದಿಗೆ ಸೋಲು ಕುರಿತ ಹೇಳಿಕೆಗೆ ಫೇಸ್‌ಬುಕ್ ಕ್ಷಮೆ

By Kannadaprabha News  |  First Published Jan 16, 2025, 8:18 AM IST

2024ರ ಚುನಾವಣೆಯಲ್ಲಿ ಎನ್‌ಡಿಎ ಸೋಲು ಕುರಿತು ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿಕೆಗೆ ಮೆಟಾ ಕ್ಷಮೆ ಕೋರಿದೆ. ಜುಕರ್‌ಬರ್ಗ್ ಹೇಳಿಕೆ ಅಚಾತುರ್ಯದಿಂದ ಆದ ತಪ್ಪು ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ. 


ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು ಎಂಬ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿಕೆ ಕುರಿತು ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಇಂಡಿಯಾ ಬುಧವಾರ ಕ್ಷಮೆ ಕೋರಿದೆ. ಇದು ಅಚಾತುರ್ಯದಿಂದ ಆದ ತಪ್ಪು ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ. ಕೋವಿಡ್ ಬಳಿಕ 2024ರಲ್ಲಿ ಭಾರತ ಸೇರಿ ವಿಶ್ವದ ವಿವಿಧೆಡೆ ನಡೆದ ಚುನಾವಣೆಯಲ್ಲಿ ಬಹುತೇಕ ಆಡಳಿತಾರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡವು ಎಂದು ಜುಕರ್‌ಬರ್ಗ್ ಪಾಡ್ ಕಾಸ್ಟ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಇದಕ್ಕೆ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 

ಇದೇ ವೇಳೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಮುಖ್ಯಸ್ಥರೂ ಆಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಕೂಡ ಝುಕರ್‌ಬರ್ಗ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಇದಕ್ಕಾಗಿ ಮೆಟಾವನ್ನು ವಿಚಾರಣೆಗೆ ಕರೆಸುವುದಾಗಿಯೂ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ಫೇಸ್‌ಬುಕ್ ಮಾತೃ ಸಂಸ್ಥೆ ಮೆಟಾ ಕ್ಷಮೆ ಕೇಳಿದ್ದು, ಪ್ರಕರಣ ಇಲ್ಲಿಗೇ ಮುಕ್ತಾಯಗೊಳಿಸುವುದಾಗಿ ದುಬೆ ತಿಳಿಸಿದ್ದಾರೆ.

Tap to resize

Latest Videos

ಇದನ್ನೂ ಓದಿ: ಕಾಂಗ್ರೆಸ್ ಪ್ರಧಾನ ಕಚೇರಿಯ ದ್ವಾರವನ್ನೇ ಬದಲಿಸಿದ ಆರ್‌ಎಸ್‌ಎಸ್ ವಾಸ್ತು

ಏನಿದು ವಿವಾದ?: ಇತ್ತೀಚೆಗೆ ಪೋಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ್ದ ಜುಕರ್‌ಬರ್ಗ್‌, ಕೋವಿಡ್‌ ನಿರ್ವಹಣೆ ವಿಷಯದಲ್ಲಿ ವಿಶ್ವದ ಬಹುತೇಕ ದೇಶಗಳು ತಮ್ಮ ನಾಗರಿಕರ ವಿಶ್ವಾಸ ಕಳೆದುಕೊಂಡವು. ಸಾಂಕ್ರಾಮಿಕ ಕುರಿತ ಸರ್ಕಾರದ ನೀತಿಗಳು ಮತ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದು ಇದಕ್ಕೆ ಕಾರಣವಾಯ್ತು. ಇದರ ಪರಿಣಾಮ, ನಂತರದ ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಬಹುತೇಕ ದೇಶಗಳಲ್ಲಿ ಆಡಳಿತಾರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡವು ಎಂದು ಹೇಳಿದ್ದರು.

ಇದನ್ನೂ ಓದಿ: 

click me!