Fact ChecK: ಆರ್‌ಬಿಐ ಬಿಡುಗಡೆ ಮಾಡಿದೆ 1000 ರು. ನಾಣ್ಯ!

Published : Nov 20, 2019, 10:46 AM IST
Fact ChecK: ಆರ್‌ಬಿಐ ಬಿಡುಗಡೆ ಮಾಡಿದೆ 1000 ರು. ನಾಣ್ಯ!

ಸಾರಾಂಶ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಇತ್ತೀಚೆಗೆ 200 ರು. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಆರ್‌ಬಿಐ ಒಂದು ರುಪಾಯಿಯ ನೋಟು, 20ರು., 100ರು., 150ರು. ಹಗೂ 1000ರು.ವಿನ ನಾಣ್ಯಗಳನ್ನು ಬಿಡುಗಡೆ ಮಾಡಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ? 

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಇತ್ತೀಚೆಗೆ 200 ರು. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಆರ್‌ಬಿಐ ಒಂದು ರುಪಾಯಿಯ ನೋಟು, 20ರು., 100ರು., 150ರು. ಹಾಗೂ 1000ರು.ವಿನ ನಾಣ್ಯಗಳನ್ನು ಬಿಡುಗಡೆ ಮಾಡಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

 

ಆದರೆ ನಿಜಕ್ಕೂ ಆರ್‌ಬಿಐ 1000 ರುಪಾಯಿಯ ನಾಣ್ಯ ಬಿಡುಗಡೆ ಮಾಡಿದೆಯೇ ಎಂದು ಪರಿಶೀಲಿಸಿದಾಗ, ಇದು ಸುಳ್ಳುಸುದ್ದಿ ಎಂದು ತಿಳಿದುಬಂದಿದೆ. ಬೂಮ್‌ ಲೈವ್‌ ಸುದ್ದಿ ಸಂಸ್ಥೆಯು ಆರ್‌ಬಿಐ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಪರಿಶೀಲಿಸಿದಾಗ ಅಲ್ಲಿ ಈ ಬಗ್ಗೆ ಮಾಹಿತಿಯೇ ಇರಲಿಲ್ಲ. ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಿದಾಗಲೂ ಯಾವುದೇ ಮುಖ್ಯವಾಹಿನಿಯ ಮಾಧ್ಯಮ ಇದನ್ನು ವರದಿ ಮಾಡಿರಲಿಲ್ಲ.

ಆದರೆ ವೈರಲ್‌ ಆಗಿರುವ ಫೋಟೋಗಳು ಲಭ್ಯವಾಗಿದ್ದು, 2016ರಲ್ಲಿ ಪ್ರಧಾನಿ ನರೇಂದ್ರ ಮೊದಿ 1000 ಮತ್ತು 500 ರು. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದಾಗ ಇದೇ ರೀತಿಯ ಸುಳ್ಳು ಸುದ್ದಿ ಹರಿದಾಡಿತ್ತು.

ವೈರಲ್‌ ಆಗಿರುವ 1000 ರು. ಮುಖಬೆಲೆ ನಾಣ್ಯವು ತಾಂಜಾವೂರಿನ ಬೃಹದೀಶ್ವರ ದೇವಾಲಯಕ್ಕೆ 1000 ವರ್ಷಗಳಾದ ಸ್ಮರಣಾರ್ಥ ಈ ನಾಣ್ಯವನ್ನು ಟಂಕಿಸಲಾಗಿತ್ತು. ಆದರೆ ಅದಕ್ಕೆ ಯಾವುದೇ ಮುಖಬೆಲೆ ಇಲ್ಲ. ಉಳಿದಂತೆ 20 ಮತ್ತು 100 ರು. ನಾಣ್ಯವನ್ನೂ ಆರ್‌ಬಿಐ ಬಿಡುಗಡೆ ಮಾಡಿಲ್ಲ. ಇನ್ನು ಗುಲಾಬಿ ಬಣ್ಣದ 1ರು. ನೋಟು ಮುದ್ರಣವನ್ನು ಆರ್‌ಬಿಐ 1974ರಲ್ಲಿಯೇ ರದ್ದು ಮಾಡಿದೆ.

- ವೈರಲ್ ಚೆಕ್ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ
19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ