
ನಾಗಪುರ[ಫೆ.23]: ಸಿಎಎ ಹಾಗೂ ಎನ್‌ಪಿಆರ್ ಜಾರಿ ಸಂಬಂಧ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೇ, ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರು ಶೀಘ್ರವೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುಳಿವನ್ನು ಆರ್‌ಎಸ್‌ಎಸ್ ನೀಡಿದೆ.
ಶನಿವಾರ ಇಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್‌ನ ಪ್ರದಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ‘ರಾಜಕೀಯ ಏರಿಳಿತಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವೇ ಆಗಿದೆ. ಅದೇ ರೀತಿ ಫಡ್ನವೀಸ್ ಅವರು ಹೆಚ್ಚು ದಿನ ಹಾಲಿ ವಿಪಕ್ಷ ನಾಯಕರಾಗಿ ಅಥವಾ ಮಾಜಿ ಮುಖ್ಯಮಂತ್ರಿಯಾಗಿಯೇ ಉಳಿಯುವುದಿಲ್ಲ' ಎಂದಿದ್ದಾರೆ
ಅಲ್ಲದೇ ಮಾಜಿ ಸಿಎಂ ಅಥವಾ ವಿಪಕ್ಷ ನಾಯಕ ಸ್ಥಾನ ಫಡ್ನವೀಸ್ ಅವರ ಹಣೆಬರಹವಲ್ಲ’ ಎಂದು ಪ್ರತಿಪಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ