
ನವದೆಹಲಿ(ಜ.30): ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ನೋಟಿಸ್ ಹೊರಡಿಸಿದೆ ಎನ್ನಲಾಗಿದ್ದು, ಇಂತದ್ದೊಂದು ನೋಟಿಸ್ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ರಯಾಣ ಸಲಹೆ ಮತ್ತು ಕೊರೊನಾ ವೈರಸ್ ಗುಣಲಕ್ಷಣಗಳ ಕುರಿತು ಆರೋಗ್ಯ ಇಲಾಖೆ ನೊಟೀಸ್ ಹೊರಡಿಸಿದೆ ಎನ್ನಲಾಗಿದ್ದು, ಇದರ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಕೊರೋನಾ ವೈರಸ್ ಹಬ್ಬುವ ಸಾಧ್ಯತೆ ಹೆಚ್ಚಿರುವ 30 ದೇಶಗಳ ಪಟ್ಟಿಯಲ್ಲಿ ಭಾರತ!
ಈ ಕುರಿತು ಪರಿಶೀಲನೆ ನಡೆಸಿದಾಗ ಕೇಂದ್ರ ಆರೋಗ್ಯ ಇಲಾಖೆ ಇಂತಹ ಯಾವುದೇ ನೊಟೀಸ್‌ನ್ನು ಜಾರಿ ಮಾಡಿಲ್ಲ ಎಂದು ಗೊತ್ತಾಗಿದೆ. ಅಲ್ಲದೇ ಚೀನಾಗೆ ಪ್ರವಾಸ ಹೊರಡುವವರಿಗೆ ಯಾವುದೇ ಪ್ರಯಾಣ ಸಲಹೆ ಕುಡ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.
ಇಂತಹ ಸುಳ್ಳು ನೊಟೀಸ್ ಪ್ರತಿ ಮೂಲಕ ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನ ನಡೆಯುತ್ತಿದ್ದು, ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಕೊರೋನಾ ವೈರಸ್: ಚೀನಾದಿಂದ ಭಾರತೀಯರ ಕರೆತರಲು ಸಿದ್ಧತೆ ಆರಂಭ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ