
ನವದೆಹಲಿ(ಏ.): ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಆಸ್ಪತ್ರೆ ವಿಫಲವಾದ ಹಿನ್ನೆಲೆಯಲ್ಲಿ ಮೃತ ಸೋಂಕಿತೆಯ ಮೃತದೇಹವನ್ನು ಬೈಕ್‌ನಲ್ಲಿ ಶವಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ.
ಘಟನೆಯ ವಿಡಿಯೋ ವೈರಲ್ ಆಗಿದ್ದು, ಇಬ್ಬರು ಮಹಿಳೆಯ ಮೃತದೇಹವನ್ನು ತಮ್ಮ ಮಧ್ಯೆ ಬೈಕ್‌ನಲ್ಲಿ ಕೂರಿಸಿಕೊಂಡು ಶವಾಗಾರಕ್ಕೆ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ. ಶ್ರೀಕಾಕುಲಂ ಜಿಲ್ಲೆಯ ಮಂಡಾಸ ಮಂಡಲ್ ಗ್ರಾಮದ 50 ವರ್ಷದ ಮಹಿಳೆ ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರು.
ಅತಿಯಾಯ್ತು ಕೊರೋನಾ ಕೆಲಸದ ಹೊರೆ: ಪರಸ್ಪರ ಹೊಡೆದಾಡಿಕೊಂಡ ವೈದ್ಯರು..!
ಮಾರಕ ಕಾಯಿಲೆಯಿಂದ ಮೃತಪಟ್ಟಾಗ ಕುಟುಂಬ ಆಕೆಯ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ಶ್ರೀಕಾಕುಲಂ ಜಿಲ್ಲೆಯ ಮಂಡಾಸ ಮಂಡಲ್ ಗ್ರಾಮದ 50 ವರ್ಷದ ಮಹಿಳೆ ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರು. ಮಾರಕ ಕಾಯಿಲೆಯಿಂದ ಮೃತಪಟ್ಟಾಗ ಕುಟುಂಬ ಆಕೆಯ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.
ಕುಟುಂಬವು ಆಂಬ್ಯುಲೆನ್ಸ್ ಅಥವಾ ಬೇರೆ ವಾಹನಕ್ಕಾಗಿ ಕಾಯುತ್ತಲೇ ಇತ್ತು. ಆಸ್ಪತ್ರೆಯಿಂದ ಯಾವುದೇ ಸಹಾಯ ಸಿಗದಿದ್ದಾಗ, ಮೃತ ಮಹಿಳೆಯ ಮಗ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ