
ನವದೆಹಲಿ(ಜ.17): ಕೃಷಿ ಕಾಯ್ದೆ ಬಿಕ್ಕಟ್ಟು ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯಲ್ಲಿನ ಮೂವರು ಸದಸ್ಯರನ್ನು ತೆಗೆದುಹಾಕುವಂತೆ ರೈತ ಸಂಘಟನೆಯೊಂದು ಸ್ವತಃ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಸಮಿತಿಯಲ್ಲಿರುವ ನಾಲ್ವರು ಸದಸ್ಯರು ಈಗಾಗಲೇ ಕೃಷಿ ಕಾಯ್ದೆ ಬೆಂಬಲಿಸಿರುವ ಕಾರಣ, ವಿವಾದ ಇತ್ಯರ್ಥ ಮಾಡುವ ನ್ಯಾಯಾಲಯದ ಆಶಯ ಈಡೇರದು ಎಂದು ಭಾರತೀಯ ಕಿಸಾನ್ ಯೂನಿಯನ್ ಲೋಕಶಕ್ತಿ ಸಂಘಟೆನ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ. ಈ ಸಮಿತಿಯಿಂದ ಭಾರತೀಯ ಕಿಸಾನ್ ಒಕ್ಕೂಟದ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ಅವರು ಹಿಂದೆ ಸರಿದಿದ್ದಾರೆ. ಹೀಗಾಗಿ ಸಮಿತಿಯಲ್ಲಿ ಈಗ ಮೂವರು ಸದಸ್ಯರು ಉಳಿದುಕೊಂಡಿದ್ದಾರೆ.
ಇದೇ ವೇಳೆ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರಾರಯಲಿ ಹಾಗೂ ಯಾವುದೇ ಪ್ರತಿಭಟನೆ ನಡೆಸುವುದಕ್ಕೆ ಆಸ್ಪದ ನೀಡಬಾರದು ಎಂದು ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆಯೂ ಭಾರತೀಯ ಕಿಸಾನ್ ಯೂನಿಯನ್ ಲೋಕಶಕ್ತಿ ಮನವಿ ಮಾಡಿದೆ. ಕೇಂದ್ರ ಸರ್ಕಾರದ ಅರ್ಜಿ ಜ.18ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ