
ಶ್ರೀನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ 'ವಂದೇ ಮಾತರಂ' ಪೂರ್ಣ ಗೀತೆ ಹಾಡುವವರೆಗೆ ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ ಮತ್ತು ಅವರ ಪುತ್ರ ಓಮರ್ ಅಬ್ದುಲ್ಲಾ ಎದ್ದು ನಿಂತು ಗೌರವ ಸಲ್ಲಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಧ್ವಜಾರೋಹಣ ವೇಳೆ ಕಾಂಗ್ರೆಸ್ ಪಕ್ಷವು ಪೂರ್ಣ ಗೀತೆ ಹಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಇದೀಗ ಅಬ್ದುಲ್ಲಾ ತಂದೆ-ಮಕ್ಕಳ ಈ ನಡೆ ಕಾಂಗ್ರೆಸ್‌ಗೆ ಇಕ್ಕಟ್ಟಿಗೆ ಸಿಲುಕಿಸಿದೆ.
ಬುಧವಾರ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಹೊಸ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಪುಷ್ಪೇಂದ್ರ ಸಿಂಗ್ ಭಾಟಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ತಂದೆ ಫಾರೂಕ್ ಅಬ್ದುಲ್ಲಾ ಪೂರ್ಣ ವಂದೇ ಮಾತರಂ ಗೀತೆ ಹಾಡುವವರೆಗೆ ಎದ್ದು ನಿಂತು ಗೌರವ ಸಲ್ಲಿಸಿದರು. ವಂದೇ ಮಾತರಂ ಪೂರ್ಣ ಗೀತೆಗೆ ಕಾಂಗ್ರೆಸ್ ಆಕ್ಷೇಪವ್ಯಕ್ತಪಡಿಸಿದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿರುವುದು ಗಮನಾರ್ಹ.
While othr debates how much of #VandeMataram should be sung Kashmir seems to hv settled mttr rather effortlessly full song followed by full anthem No debate,No drama, No fuel for idiot box
From inaugural event of the film festival in #Srinagar last evening pic.twitter.com/SmoSW7BTcv— Thakur Abhi (@Thakur3880) September 8, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ