
ನವದೆಹಲಿ(ಮಾ.28); ಕ್ಷಮೇ ಕೇಳಲು ನಾನು ರಾಹುಲ್ ಗಾಂಧಿ, ಸಾವರ್ಕರ್ ಅಲ್ಲ ಅನ್ನೋ ರಾಹುಲ್ ಗಾಂಧಿ ಮಾತು ಇದೀಗ ಕಾಂಗ್ರೆಸ್‌ಗೆ ತೀವ್ರ ತಲೆನೋವು ತಂದಿದೆ. ಮೋದಿ ಸಮುದಾಯವನ್ನು ಅವಮಾನಿಸಿ 2 ವರ್ಷ ಜೈಲು ಶಿಕ್ಷೆ ತೀರ್ಪಿಗೆ ಗುರಿಯಾಗಿರುವ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇತ್ತ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ ಅನ್ನೋ ಹೇಳಿಕೆ ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಕಾಂಗ್ರೆಸ್ ಮೈತ್ರಿ ಪಕ್ಷಗಳೇ ಈ ಹೇಳಿಕೆಯನ್ನು ವಿರೋಧಿಸಿದೆ. ಎನ್‌ಸಿಪಿ ಹಿರಿಯ ನಾಯಕ ಶರದ್ ಪವಾರ್, ರಾಹುಲ್ ಗಾಂಧಿಗೆ ಸೂಚನೆ ನೀಡಿದ್ದಾರೆ. ವೀರ್ ಸಾವರ್ಕರ್ ಟೀಕೆ ಸರಿಯಲ್ಲ. ರಾಹುಲ್ ಗಾಂಧಿ ಹೋರಾಟ ಬಿಜೆಪಿ ಹಾಗೂ ಮೋದಿ ವಿರುದ್ಧ ಇರಲಿ ಎಂದಿದ್ದಾರೆ.
ರಾಹುಲ್ ಗಾಂಧಿ ವಿಷಯಾಂತರ ಮಾಡುವುದು ಸೂಕ್ತವಲ್ಲ. ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಹೋರಾಟ ಮಾಡಲಿ. ಇದಕ್ಕೆ ನಮ್ಮ ಬೆಂಬಲವಿದೆ. ಆದರೆ ವೀರ ಸಾವರ್ಕರ್ ಎಳೆದು ತರುವುದು ಸೂಕ್ತವಲ್ಲ. ಇದರಿಂದ ಕಾಂಗ್ರೆಸ್ ಮಿತ್ರ ಪಕ್ಷಗಳಲ್ಲಿ ಒಡಕು ಮೂಡುತ್ತಿದೆ. ವೀರ ಸಾವರ್ಕರ್ ಟೀಕಿಸುವುದು ಸರಿಯಲ್ಲ. ಸಾವರ್ಕರ್ ಆರ್‌ಎಸ್‌ಎಸ್ ಸದ್ಯರಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಬೆಂಬಲಿಸಿ ಕಾಂಗ್ರೆಸ್ ಪ್ರತಿಭಟನೆ, ಕೆಂಪು ಕೋಟೆ ವಲಯದಲ್ಲಿ 144 ಸೆಕ್ಷನ್ ಜಾರಿ!
ಇತ್ತ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಹೋರಾಟ ಮಾಡಲಿ. ಪ್ರಧಾನಿ ಮೋದಿ ವಿರುದ್ಧ, ಬಿಜೆಪಿ ವಿರುದ್ಧ ಹೋರಾಟ ನಡೆಸಲಿ. ನಾವು ಬೆಂಬಲಿಸುತ್ತೇವೆ. ಆದರೆ ವೀರ್ ಸಾವರ್ಕರ್ ವಿರುದ್ದ ಟೀಕೆ ಸಲ್ಲ. ವೀರ ಸಾವರ್ಕರ್ ನಮ್ಮ ದೇವರು. ದೇವರ ವಿರುದ್ಧ ಒಂದು ಮಾತು ಸಹಿಸಲ್ಲ ಎಂದು ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.
ಇತ್ತ ಬಿಜೆಪಿ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕ್ಷಮೆ ಕೇಳಲು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ. ಗಾಂಧಿ ಯಾವತ್ತೂ ಯಾರ ಬಳಿಯೂ ಕ್ಷಮೆ ಕೇಳಲ್ಲ. ಕೇಳಿಲ್ಲ ಎಂದಿದ್ದಾರೆ. ಆದರೆ ಇದೇ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೇ ಎಂಬ ಹೇಳಿಕೆ ನೀಡಿ ಸುಪ್ರೀಂ ಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ. ಸುದ್ದಿಗೋಷ್ಠಿ ಮಾಡುವುದಾಗ ಇದು ನೆನಪಿರಲಿಲ್ಲವೇ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ರಾಹುಲ್ ಅನರ್ಹತೆ ಹಿಂದೆ ಬಿಜೆಪಿ ಕುತಂತ್ರ: ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಾಂಗ್ರೆಸ್ ಹಾಗೂ ವಿಪಕ್ಷಗಳು ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸುತ್ತಿದೆ. ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಕಾಂಗ್ರೆಸ್, ದೇಶದಲ್ಲಿ ಬಿಜೆಪಿ ವಿರುದ್ಧ ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತದೆ. ರಾಹುಲ್ ಗಾಂಧಿ ಶಕ್ತಿಯನ್ನು ದುರ್ಬಲಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ