
ನವದೆಹಲಿ(ಫೆ.08): ಚುನಾವಣಾ ದಿನದವರೆಗೂ ಬಹುತೇಕ ಶಾಂತವಾಗಿಯೇ ಇದ್ದ ರಾಷ್ಟ್ರ ರಾಜಧಾನಿ ನವದೆಹಲಿ, ಮತದಾನದ ದಿನ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದೆ. ಮತಗಟ್ಟೆ ಸಮೀಪ ಆಪ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ.
ಮಜ್ನು ಕಾ ಟೀಲಾ ಮತಗಟ್ಟೆ ಸಮೀಪ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಾಂಬಾ ಬಂದಾಗ ಆಪ್ ಕಾರ್ಯಕರ್ತನೋರ್ವ ಆಕೆಯ ವಿರುದ್ಧ ಘೋಷಣೆ ಕೂಗಿದ. ಇದರಿಂದ ಸಿಟ್ಟಾದ ಅಲ್ಕಾ ಲಾಂಬಾ ಆತನ ಕೆನ್ನೆಗೆ ಬಾರಿಸಲು ಯತ್ನಿಸಿದ್ದಾರೆ. ಈ ವೇಳೆ ಅಲ್ಕಾ ಹೊಡೆತದಿಂಧ ತಪ್ಪಿಸಿಕೊಂಡ ಆಪ್ ಕಾರ್ಯಕರ್ತನೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಜಗಳಕ್ಕಿಳಿದಿದ್ದಾರೆ.
ಮತಗಟ್ಟೆ ಬಳಿ ಆಪ್ ಕಾರ್ಯಕರ್ತನಿಗೆ ಅಲ್ಕಾ ಲಾಂಬಾ ಹೊಡೆಯಲೆತ್ನಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡೂ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ನಿರತರಾಗಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ, ಆಪ್ ಕಾರ್ಯಕರ್ತ ಹರ್ಮೇಶ್ ತಮ್ಮ ಕುರಿತು ಅವಹೇಳನಕಾರಿ ಪದಗಳನ್ನು ಬಳಸಿ ಮಾತನಾಡಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ಹೇಳಿದ್ದಾರೆ.
ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ