ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 5 ವರ್ಷ ಜೈಲು: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ!

By Suvarna NewsFirst Published Jun 20, 2021, 8:14 AM IST
Highlights

* ವೈದ್ಯರ ಮೇಲೆ ಹಲ್ಲೆ ಮಾಡಿದರೆ 5 ವರ್ಷ ಜೈಲು

* ಸಾಂಕ್ರಾಮಿಕ ರೋಗ ಕಾಯ್ದೆಯಡಿ ಎಫ್‌ಐಆರ್‌

* ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ(ಜೂ.20): ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ದೂರು ದಾಖಲಿಸಿಕೊಂಡು, ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಕಾಯ್ದೆ-2020 ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಈ ಕಾಯ್ದೆಯಡಿ ದೋಷಿಗಳಾದರೆ 5 ವರ್ಷದವರೆಗೆ ಜೈಲುಶಿಕ್ಷೆ ಆಗಲಿದೆ.

ದೇಶಾದ್ಯಂತ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಸಂಬಂಧ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ‍್ಯದರ್ಶಿ ಅಜಯ್‌ ಭಲ್ಲಾ, ‘ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲಿನ ಹಲ್ಲೆ ಅವರ ಆತ್ಮಸ್ಥೈರ‍್ಯವನ್ನು ಕುಗ್ಗಿಸಬಹುದು. ಅವರಲ್ಲಿ ಅಭದ್ರತೆಯ ಭಾವ ಉಂಟುಮಾಡಬಹುದು. ಇದು ಇಡೀ ಆರೋಗ್ಯ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಾಗಾಗಿ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ.

3ನೇ ಅಲೆಯಲ್ಲಿ ರಾಜ್ಯದ 1-1.5 ಲಕ್ಷ ಮಕ್ಕಳಿಗೆ ಸೋಂಕು: ಡಾ|ದೇವಿಶೆಟ್ಟಿ ಸಮಿತಿ ವರದಿ!

ಸಾಂಕ್ರಾಮಿಕ ರೋಗ ಕಾಯ್ದೆ-2020 ಪ್ರಕಾರ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 2 ಲಕ್ಷ ರು. ವರೆಗೆ ದಂಡ ವಿಧಿಸುವ ಅವಕಾಶವಿದೆ. ಅಲ್ಲದೆ ಹಲ್ಲೆ ಗಂಭೀರವಾಗಿದ್ದರೆ 7 ವರ್ಷದ ವರೆಗೆ ಕಾರಾಗೃಹ ಶಿಕ್ಷೆ ಮತ್ತ 5 ಲಕ್ಷದ ವರೆಗೆ ದಂಡ ವಿಧಿಸಬಹುದು. ಮತ್ತು ಇಂಥ ಅಪರಾಧ ಜಾಮೀನು ರಹಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!