ನಾಳೆ ಅಂತಿಮ ದಿನದ ಭಾರತ್ ಜೋಡೋ ಯಾತ್ರೆ : ಟಿಎಂಸಿ, ಎಸ್‌ಪಿ, ಟಿಡಿಪಿ ಸೇರಿ 9 ಪಕ್ಷಗಳ ಗೈರು..!

By BK Ashwin  |  First Published Jan 29, 2023, 7:30 PM IST

ಯಾತ್ರೆಯ ವೇಳೆ ಯಾವುದೇ ಭದ್ರತಾ ಲೋಪವಾಗಿರುವುದನ್ನು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ. ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಶನಿವಾರ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. 


ಶ್ರೀನಗರ (ಜನವರಿ 29, 2023): ಸೋಮವಾರ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ 12 ವಿರೋಧ ಪಕ್ಷಗಳು ಪಾಲ್ಗೊಳ್ಳಲಿವೆ ಎಂದು ಮೂಲಗಳು ಇಂದು ತಿಳಿಸಿವೆ. ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ 9 ಪಕ್ಷಗಳ ನಾಯಕರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ಪೈಕಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಪಕ್ಷ ಸಹ ಸೇರಿದೆ ಎಂದು ಹೇಳಲಾಗಿದೆ.

ಆದರೆ, ಎಂ.ಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿ.ಪಿ.ಐ., ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಎಂದು ತಿಳಿದುಬಂದಿದೆ.

Tap to resize

Latest Videos

ಇದನ್ನು ಓದಿ: ರಾಹುಲ್‌ ಭಾರತ್ ಜೋಡೋ ಯಾತ್ರೆ ನಾಳೆ ಕಾಶ್ಮೀರದಲ್ಲಿ ಅಂತ್ಯ: ಭಾರಿ ಭದ್ರತೆ

 ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಸಹೋದರ ರಾಹುಲ್ ಗಾಂಧಿಯವರೊಂದಿಗೆ ಭಾರತ್‌ ಜೋಡೋ ಯಾತ್ರೆಗೆ ಸೇರಿಕೊಂಡಿದ್ದಾರೆ. ಇದು ಭದ್ರತಾ ಉಲ್ಲಂಘನೆಯ ಆರೋಪದ ಕಾರಣ ಶುಕ್ರವಾರ ರದ್ದುಗೊಂಡಿದ್ದ ನಂತರ ಆವಂತಿಪೋರಾದ ಚೆರ್ಸೂ ಗ್ರಾಮದಿಂದ ಪುನಾರಂಭವಾಯಿತು. ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಅವಂತಿಪೋರಾದಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
.
ಆದರೆ, ಯಾತ್ರೆಯ ವೇಳೆ ಯಾವುದೇ ಭದ್ರತಾ ಲೋಪವಾಗಿರುವುದನ್ನು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ. ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಶನಿವಾರ ಈ ಆರೋಪಗಳನ್ನು ತಳ್ಳಿಹಾಕಿದರು ಮತ್ತು ಪ್ರಚಾರದ ಸಮಯದಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆ ಸ್ಧಗಿತ, ಭದ್ರತಾ ವೈಫಲ್ಯ ಆರೋಪ!

ಇನ್ನೊಂದೆಡೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಜನವರಿ 27 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ "ಭದ್ರತಾ ಲೋಪ" ಘಟನೆಯ ಬಗ್ಗೆ ಮತ್ತು ಜಮ್ಮು ಹಾಗೂ ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಮಿತ್ ಶಾ ವೈಯಕ್ತಿಕವಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿದ್ದಾರೆ.

ಮುಂದಿನ 2 ದಿನಗಳ ಕಾಲ ಯಾತ್ರೆಗೆ ಹಾಗೂ ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬೃಹತ್ ಸಂಖ್ಯೆಯ ಜನರು ಭಾಗಿಯಾಗುವುದನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅಲ್ಲದೆ, ಹಲವು ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಇತರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಜನವರಿ 30 ರಮದು ನಡೆಯಲಿರುವ ಸಮಾರೋಪ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್‌ ಗಾಂಧಿಯನ್ನು ತಬ್ಬಿಕೊಂಡ ಅಭಿಮಾನಿ: ತಳ್ಳಿದ ಕಾಂಗ್ರೆಸ್‌ ಕಾರ್ಯಕರ್ತರು

ಈ ಹಿನ್ನೆಲೆ, ಈ ವಿಷಯದಲ್ಲಿ ನೀವು ಖುದ್ದಾಗಿ ಮಧ್ಯಪ್ರವೇಶಿಸಿ ಜನವರಿ 30 ರಂದು ಶ್ರೀನಗರದಲ್ಲಿ ನಡೆಯುವ ಯಾತ್ರೆ ಮತ್ತು ಕಾರ್ಯಕ್ರಮ ಮುಗಿಯುವವರೆಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರೆ ನಾನು ಕೃತಜ್ಞನಾಗಿದ್ದೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಮಿತ್ ಶಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗನ ಈ ಯಾತ್ರೆಯು ಸೆಪ್ಟೆಂಬರ್ 7 ರಂದು ದೇಶದ ದಕ್ಷಿಣ ತುದಿಯಿಂದ ಪ್ರಾರಂಭವಾಯಿತು ಮತ್ತು ಸುಮಾರು 145 ದಿನಗಳಲ್ಲಿ 3,970 ಕಿಮೀ, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಕೊನೆಗೊಳ್ಳುತ್ತದೆ. 

ಇದನ್ನೂ ಓದಿ: ನಾನು RSS ಕಚೇರಿಗೆ ಬರ್ಬೇಕಾದ್ರೆ ನನ್ನ ತಲೆ ಕಡೀಬೇಕಷ್ಟೇ: ರಾಹುಲ್‌ ಗಾಂಧಿ

click me!