ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು 25 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ಈಗ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.
ನವದೆಹಲಿ: ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು 25 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ಈಗ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ. 12 ಮಕ್ಕಳನ್ನು ಆಸ್ಪತ್ರೆಯಿಂದ ರಕ್ಷಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ ಪ್ರದೇಶದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿ ನೀಡಿದ ಮಾಹಿತಿ ಪ್ರಕಾರ, ರಾತ್ರಿ 11.32ರ ಸುಮಾರಿಗೆ ಅವರಿಗೆ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಬಗ್ಗೆ ಕರೆ ಬಂದಿದೆ. ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ 16 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿವೆ. ಆದರೂ ದುರಾದೃಷ್ಟವಶಾತ್ 7 ಮಕ್ಕಳು ಸಾವನ್ನಪ್ಪಿವೆ. 12 ಮಕ್ಕಳನ್ನು ಘಟನಾ ಸ್ಥಳದಿಂದ ರಕ್ಷಣೆ ಮಾಡಲಾಗಿದೆ.
ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, 12 ಮಕ್ಕಳನ್ನು ಸ್ಥಳದಿಂದ ರಕ್ಷಿಸಲಾಗಿತ್ತು. ಆದರೆ ಅವರಲ್ಲಿ 7 ಮಕ್ಕಳು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ 5 ಮಕ್ಕಳಿಗೆ ಬೇರೆಡೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈ ಅಗ್ನಿ ಅನಾಹುತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ, ಘಟನೆ ಸಂಬಂಧ ಆಸ್ಪತ್ರೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
undefined
ಈ ಅಗ್ನಿ ಅನಾಹುತದಲ್ಲಿ ಪುಟ್ಟ ಮಕ್ಕಳು ಪ್ರಾಣ ಕಳೆದುಕೊಂಡಿರುವುದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದ್ದು,ಇದು ಹೃದಯ ಹಿಂಡುತ್ತಿದೆ ಎಂದು ಬೇಸರಿಸಿದ್ದಾರೆ. ಘಟನೆಗೆ ಏನು ಕಾರಣ ಎಂಬುದನ್ನು ತನಿಖೆ ನಡೆಸಲಾಗುವುದು, ಹಾಗೂ ಈ ದುರಂತಕ್ಕೆ ಜವಾಬ್ದಾರರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮತ್ತೊಂದು ಅಗ್ನಿ ದುರಂತದಲ್ಲಿ ಮೂವರು ಬಲಿ
ಹಾಗೆಯೇ ದೆಹಲಿಯ ಕೃಷ್ಣ ನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ವಸತಿ ಸಂಕೀರ್ಣದಲ್ಲಿಈ ಅಗ್ನಿ ಅನಾಹುತ ನಡೆದಿದೆ. ನಡುರಾತ್ರಿ 2.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಬಂದಿದೆ. ಬೆಳಗ್ಗೆ 7.20ರ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿ ಶಾಮಕ ಸೇವೆಯ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. ಈ ಘಟನೆಯಲ್ಲಿ 13 ಜನರನ್ನು ರಕ್ಷಿಸಲಾಗಿತ್ತು. ಆದರೆ ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
Breaking: ರಾಜ್‌ಕೋಟ್‌ನ ಗೇಮಿಂಗ್ ಜೋನ್‌ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವಿನ ಶಂಕೆ!
| Delhi: A massive fire broke out at a New Born Baby Care Hospital in Vivek Vihar
As per a Fire Officer, Fire was extinguished completely, 11-12 people were rescued and taken to hospital and further details are awaited.
(Video source - Fire Department) https://t.co/lHzou6KkHH pic.twitter.com/pE95ffjm9p