
ನವದೆಹಿ(ಜೂ.12): ರಾಷ್ಟ್ರ ರಾಜಧಾನಿಯ, ಲಾಜ್‌ಪತ್‌ನಗರದ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಶನಿವಾರ ಬೆಳಗ್ಗೆ ಅಗ್ನಿ ದುರಂತ ಸಂಭವಿಸಿದೆ. ಶೋರೂಂ ಒಂದರಿಂದ ಬೆಂಕಿ ಕೆನ್ನಾಲಿಗೆ ಕಂಡು ಬಂದಿದೆ. ಆರಂಭದಲ್ಲಿ ಅಲ್ಲಿದ್ದ ಜನರೇ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗದಾಗ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ನಿಡಿರುವ ಮಾಹಿತಿ ಅನ್ವಯ ಈ ಅಗ್ನ ಅವಘಡ ಬೆಳಗ್ಗೆ ಸುಮಾರು 10.20 ಗಂಟೆಗೆ ಸಮಭವಿಸಿದೆ. ಸ್ಥಳಕ್ಕೆ ಮೂವತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಕಳುಹಿಸಿ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.
ಈ ಬ್ಗಗೆ ಹೆಚ್ಚಿನ ಮಾಹಿತಿ ನಿಡಿರುವ ಅಗ್ನಿಶಾಮಕ ದಳ ಸಿಬ್ಬಂದಿ 'ನಮಗೆ ಲಾಜ್‌ಪತ್ ನಗರದ ಮಾರ್ಕೆಟ್‌ನ ಬ್ಲಾಕ್ 1ರ ಸೆಮಟ್ರಲಗ್ ಮಾರ್ಕೆಟ್ನಲ್ಲಿ ಬೆಂಕಿ ದುರಂತ ಸಂಭವಿಸಿರುವ ಮಾಹಿತಿ ಸಿಕ್ಕಿದೆ. ಇನ್ನು ಮೂವತ್ತಕ್ಕೂ ಹೆಚ್ಚು ವಾಹನಗಳನ್ನು ಬೆಂಕಿ ನಂದಿಸಲು ಕಳುಹಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸದ್ಯ ಇಲ್ಲಿ ಕೂಲಿಂಗ್ ಆಪರೇಷನ್ ನಡೆಯುತ್ತಿದೆ. ಈ ದುರಂತದಲ್ಲಿ ಅದೃಷ್ಟವಶಾತ್ ಜೀವ ಹಾನಿಯಾಗಿಲ್ಲ. ಆದರೆ ಬೆಂಕಿ ತಗುಲಿದ್ದು ಹೇಗೆ ಎಂಬ ಕಾರಣ ಮಾತ್ರ ತಿಳಿದು ಬಂದಿಲ್ಲ' ಎಂದಿದ್ದಾರೆ.
ಇದಕ್ಕೂ ಮುನ್ನ ಏಪ್ರಿಲ್ 8ರಂದು ದಿಲ್‌ಶಾಯಿ ಗಾರ್ಡನ್‌ನಲ್ಲಿ ಸ್ಟೇಷನರಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇಲ್ಲೂ ಬೆಂಕಿ ನಂದಿಸಲು ಹದಿನೈದಸು ಅಗ್ನಿಶಾಮಕ ವಾಹನಗಳು ಆಗಮಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ