ಹೈದರಾಬಾದ್ (ತೆಲಂಗಾಣ): ಬಸ್ಸೊಂದು ಟೈರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ತೆಲಂಗಾಣ ಸಾರಿಗೆ ಇಲಾಖೆಗೆ ಸೇರಿದ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ದುರಂತದಲ್ಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಮಚರೆಡ್ಡಿ ಮಂಡಲದ ಘಾನ್‌ಪುರ್ (ಎಂ) (Ghanpur(M) ಗ್ರಾಮದ ಬಳಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್‌ಆರ್‌ಟಿಸಿ) ಬಸ್ ಎದುರು ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಬಸ್‌ನ ಒಂದು ಟೈರ್ ಒಡೆದು ಚಾಲಕನ ನಿಯಂತ್ರಣ ತಪ್ಪಿದ ನಂತರ ಎದುರಿನಿಂದ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಆಗ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಕಾಮರೆಡ್ಡಿ (Kamareddy) ಕಡೆಯಿಂದ ಕರೀಂನಗರ(Karimnagar) ಕಡೆಗೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ನಿಜಾಮಾಬಾದ್ (Nizamabad) ಜಿಲ್ಲೆಯವರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
Bengaluru: ಪೀಣ್ಯ ಫ್ಲೈಓವರ್ ಮೇಲೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ
ನಿನ್ನೆಯಷ್ಟೇ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಿಶ್ಚಿತಾರ್ಥಕ್ಕೆ ಹೋಗುತ್ತಿದ್ದ ಬಸ್ಸೊಂದು ಪ್ರಪಾತಕ್ಕೆ ಬಿದ್ದು 8 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಆಂಧ್ರಪ್ರದೇಶದ (Andhra Pradesh) ಚಿತ್ತೂರು (Chittoor) ಜಿಲ್ಲೆಯ ಭಾಕರಪೇಟ ಕನುಮಾ (Bhakarapeta Kanuma)ಎಂಬಲ್ಲಿ ಮದನಪಲ್ಲಿ-ತಿರುಪತಿ ಹೆದ್ದಾರಿಯಲ್ಲಿ (Madanapalle-Tirupati highway) ಈ ದುರ್ಘಟನೆ ಸಂಭವಿಸಿತ್ತು. ಖಾಸಗಿ ಬಸ್ ಕಣಿವೆಗೆ ಉರುಳಿದ ಪರಿಣಾಮ ಮಗು, ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 63 ಮಂದಿ ಈ ಬಸ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ಬಸ್ ಚಾಲಕನ ಅತಿವೇಗದ ಚಾಲನೆಯೇ ಈ ಅವಘಢಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Road Accident: ಮೇಲುಕೋಟೆ ಬಳಿ ಭೀಕರ ಅಪಘಾತ, ತೀರ್ಥಹಳ್ಳಿಯಲ್ಲಿ ಗುಂಡೇಟು!
ಅನಂತಪುರ (Anantapur) ಜಿಲ್ಲೆಯ ಧರ್ಮಾವರಂನ (Dharmavaram) ರಾಜೇಂದ್ರ ನಗರದ (Rajendra Nagar) ವೇಣು (Venu) ಅವರಿಗೆ ಚಿತ್ತೂರು (Chittoor) ಜಿಲ್ಲೆಯ ನಾರಾಯಣವನಂ (Narayanavanam) ಪ್ರದೇಶದ ಯುವತಿಯೊಂದಿಗೆ ಮದುವೆ ನಿಗದಿಯಾಗಿತ್ತು. ಹೀಗಾಗಿ ಭಾನುವಾರ ಬೆಳಗ್ಗೆ ತಿರುಚಾನೂರಿನಲ್ಲಿ (Thiruchanur) ನಿಶ್ಚಿತಾರ್ಥ ಏರ್ಪಡಿಸಲಾಗಿತ್ತು. ವರ ವೇಣುವಿನ ಕುಟುಂಬದವರು ಇತರ 63 ಮಂದಿಯೊಂದಿಗೆ ಖಾಸಗಿ ಬಸ್‌ನಲ್ಲಿ ಮಧ್ಯಾಹ್ನ 3.30 ಕ್ಕೆ ಧರ್ಮವರಂನಿಂದ ಹೊರಟಿದ್ದರು. ದಾರಿಮಧ್ಯೆ ಚಿತ್ತೂರು ಜಿಲ್ಲೆಯ ಪೀಲೇರು (Peeleru) ಎಂಬಲ್ಲಿ ರಾತ್ರಿ 8 ಗಂಟೆಗೆ ಡಾಬಾದಲ್ಲಿ ಎಲ್ಲರೂ ಊಟ ಮಾಡಿ, ಮತ್ತೆ ಪ್ರಯಾಣ ಆರಂಭಿಸಿ ಭಾಕರಪೇಟ ಘಾಟ್ (Bhakarapeta Ghat) ತಲುಪಿದರು. ಇಲ್ಲಿ ತಿರುವು ತೆಗೆದುಕೊಳ್ಳುವಾಗ ಚಾಲಕ ಸ್ಟೇರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು, ಬಸ್ ಕಣಿವೆಗೆ ಧುಮುಕಿದೆ.
ಅಪಘಾತದ ಮಾಹಿತಿ ಪಡೆದ ಶಾಸಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ಅವರು ತಿರುಪತಿ ರುಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಈ ಅಪಘಾತ ಸಂಭವಿಸಿದ ವೇಳೆ ಕತ್ತಲಾಗಿದ್ದರಿಂದ, ಘಾಟ್ ರಸ್ತೆಯಾದ್ದರಿಂದ, ಘಟನೆಯನ್ನು ಯಾರೂ ಗಮನಿಸಲಿಲ್ಲ, ಆದರೆ ಗಾಯಾಳುಗಳ ಕಿರುಚಾಟವನ್ನು ಕೇಳಿದ ಕೆಲವು ವಾಹನ ಚಾಲಕರು ರಾತ್ರಿ 10:30 ರ ವೇಳೆಗೆ ತಮ್ಮ ಬೈಕ್‌ಗಳನ್ನು ನಿಲ್ಲಿಸಿ ನೋಡಿದಾಗ ಬಸ್ ಕಣಿವೆಗೆ ಬಿದ್ದಿದ್ದು ಗೊತ್ತಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ