3 ರಾಜ್ಯಗಳಲ್ಲಿ ಟಿಕೆಟ್‌ ಘೋಷಣೆ ಮಾಡಿದ ಬಿಜೆಪಿ: ರಾಜಸ್ಥಾನದಲ್ಲಿ 7 ಮಂದಿ ಸಂಸದರು ಕಣಕ್ಕೆ

By Anusha Kb  |  First Published Oct 10, 2023, 7:16 AM IST

ಪಂಚರಾಜ್ಯ ಚುನಾವಣೆಗಳ ದಿನಾಂಕ ಘೋಷಣೆಯಾಗುತ್ತಿದ್ದಂತೆ 3 ರಾಜ್ಯಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.


ನವದೆಹಲಿ: ಪಂಚರಾಜ್ಯ ಚುನಾವಣೆಗಳ ದಿನಾಂಕ ಘೋಷಣೆಯಾಗುತ್ತಿದ್ದಂತೆ 3 ರಾಜ್ಯಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ ಸಿಂಗ್‌, ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಸೇರಿದಂತೆ ಹಲವು ಸಂಸದರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ರಾಜಸ್ಥಾನದಲ್ಲಿ ಹಾಲಿ ಸಂಸದ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಸೇರಿ 7 ಸಂಸದರನ್ನು ಕಣಕ್ಕಿಳಿಸಿದೆ.

ಛತ್ತೀಸ್‌ಗಢದಲ್ಲಿ (Chattisgarh) 64 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಜೆಪಿ (BJP) ಬಿಡುಗಡೆ ಮಾಡಿದ್ದು, ಒಟ್ಟು ಅಭ್ಯರ್ಥಿಗಳ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ (Raman Singh) ಅವರಿಗೂ ಟಿಕೆಟ್‌ ನೀಡಲಾಗಿದ್ದು, ರಜ್ನಾನಂದ್‌ಗಾಂವ್‌ನಿಂದ ಅವರು ಸ್ಪರ್ಧಿಸಲಿದ್ದಾರೆ. ಅಲ್ಲದೇ ಸಂಸದರಾದ ರೇಣುಕಾ ಸಿಂಗ್‌. ಗೋಮತಿ ಸಾಯಿ ಅವರಿಗೂ ಟಿಕೆಟ್‌ ನೀಡಲಾಗಿದೆ.

Tap to resize

Latest Videos

ರಾಜಸ್ಥಾನ ಚುನಾವಣೆಗೆ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟಿಸಿದ ಬಿಜೆಪಿ, ಮಾಜಿ ಸಿಎಂಗೆ ಕೊಕ್!

ರಾಜಸ್ಥಾನದಲ್ಲೂ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 7 ಮಂದಿ ಸಂಸದರು ಇಲ್ಲಿ ಸ್ಪರ್ಧಿಸಲಿದ್ದಾರೆ. ಸಂಸದೆ ದಿಯಾ ಕುಮಾರಿ ವಿದ್ಯಾಧರ ನಗರದಿಂದ, ಸಂಸದ ರಾಜ್ಯವರ್ಧನ ಸಿಂಗ್‌ ರಾಥೋಡ್‌ ಜೋತ್ವಾರಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ರಾಜಸ್ಥಾನದಲ್ಲಿ ಒಟ್ಟು 200 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇನ್ನು ಮಧ್ಯಪ್ರದೇಶದಲ್ಲೂ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಾರಿ ಟಿಕೆಟ್‌ ನೀಡಲಾಗುತ್ತಿಲ್ಲ ಎಂಬ ವದಂತಿಗಳ ನಡುವೆಯೇ ಹಾಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivaraj Singh Chouhan) ಅವರಿಗೆ ಟಿಕೆಟ್‌ ನೀಡಲಾಗಿದೆ. ರಾಜ್ಯ ಗೃಹ ಸಚಿವ ನರೋತ್ತಮ್‌ ಮಿಶ್ರಾ (Narottam Mishra) ಅವರಿಗೂ ದಟಿಯಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

Breaking: ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ!

 

click me!