Pahalgam terror attack: ಪಕ್ಷದ ನಿಲುವು ಪಾಲಿಸಿ, ಇಲ್ಲ ಸುಮ್ಮನಿರಿ: ಕಾಂಗ್ರೆಸ್‌

Published : Apr 29, 2025, 05:14 AM ISTUpdated : Apr 29, 2025, 05:19 AM IST
Pahalgam terror attack: ಪಕ್ಷದ ನಿಲುವು ಪಾಲಿಸಿ, ಇಲ್ಲ ಸುಮ್ಮನಿರಿ: ಕಾಂಗ್ರೆಸ್‌

ಸಾರಾಂಶ

ಪಹಲ್ಗಾಂ ದಾಳಿ ಕುರಿತಂತೆ ಪಕ್ಷದ ಕೆಲ ನಾಯಕರು ನೀಡಿರುವ ಹೇಳಿಕೆಗಳು ವೈಯುಕ್ತಿಕವೇ ಹೊರತೂ, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟಪಡಿಸಿದೆ. ಕಾಂಗ್ರೆಸ್‌ ನಾಯಕರ ಹೇಳಿಕೆಗಳು ಪಾಕಿಸ್ತಾನದ ಭಾಷೆಯಲ್ಲಿದೆ ಎಂಬ ಬಿಜೆಪಿಯ ತೀವ್ರ ಆಕ್ಷೇಪದ ನಡುವೆಯೇ ಅದು ಈ ಸ್ಪಷ್ಟನೆ ನೀಡಿದೆ.

ನವದೆಹಲಿ (ಏ.29):  ಪಹಲ್ಗಾಂ ದಾಳಿ ಕುರಿತಂತೆ ಪಕ್ಷದ ಕೆಲ ನಾಯಕರು ನೀಡಿರುವ ಹೇಳಿಕೆಗಳು ವೈಯುಕ್ತಿಕವೇ ಹೊರತೂ, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟಪಡಿಸಿದೆ. ಕಾಂಗ್ರೆಸ್‌ ನಾಯಕರ ಹೇಳಿಕೆಗಳು ಪಾಕಿಸ್ತಾನದ ಭಾಷೆಯಲ್ಲಿದೆ ಎಂಬ ಬಿಜೆಪಿಯ ತೀವ್ರ ಆಕ್ಷೇಪದ ನಡುವೆಯೇ ಅದು ಈ ಸ್ಪಷ್ಟನೆ ನೀಡಿದೆ.

ಜೊತೆಗೆ ಘಟನೆ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿಲುವನ್ನು ಬೆಂಬಲಿಸುವುದಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ವಿಶೇಷ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯಲ್ಲೂ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಪಕ್ಷದ ವಕ್ತಾರ ಜೈರಾಂ ರಮೇಶ್‌, ‘ಪಹಲ್ಗಾಂ ದಾಳಿ ಕುರಿತು ಕಾಂಗ್ರೆಸ್‌ ನಾಯಕರು ನೀಡಿರುವ ಹೇಳಿಕೆಗಳು ವೈಯಕ್ತಿಕವಾದದ್ದೇ ಹೊರತು ಪಕ್ಷದ್ದಲ್ಲ. ಪಕ್ಷವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಡಬ್ಲ್ಯೂಸಿ ನಡೆಸಿ ತೀರ್ಮಾನ ತೆಗೆದುಕೊಂಡಿದೆ. ಇದು ಮಾತ್ರವೇ ಪಕ್ಷದ ಅಭಿಪ್ರಾಯ. ನಾಯಕರು ಹೇಳುತ್ತಿರುವುದೆಲ್ಲಾ ಅವರ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಭಾಷಣದ ವೇಳೆ ಕಪ್ಪು ಪಟ್ಟಿ ಪ್ರದರ್ಶಿಸಿ ಹೈಡ್ರಾಮಾ...

ಇತ್ತೀಚೆಗೆ ಪಕ್ಷದ ನಾಯಕರಾದ ವಿಜಯ್‌ ವಡೆಟ್ಟಿವಾರ್‌, ಮಣಿಶಂಕರ್‌ ಅಯ್ಯರ್‌, ಶಶಿ ತರೂರ್‌, ತಾರಿಖ್‌ ಅಹಮದ್‌ ಖರ್ರಾ, ಸೈಫುದ್ದೀನ್‌ ಸೋಜ್‌, ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಿಮ್ಮಾಪುರ ನೀಡಿದ್ದ ಹೇಳಿಕೆಗಳು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರವಿಶಂಕರ್‌ ಪ್ರಸಾದ್‌, ‘ಪಾಕಿಸ್ತಾನ ಜತೆಗೆ ಯುದ್ಧ ಬೇಡ, ಪಹಲ್ಗಾಂನಲ್ಲಿ ಉಗ್ರರು ಹಿಂದೂಗಳನ್ನು ಗುರಿ ಮಾಡಿ ಹತ್ಯೆ ಮಾಡಿಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ನೀಡುತ್ತಿರುವ ಹೇಳಿಕೆ ಮುಂದಿಟ್ಟುಕೊಂಡು ಪಾಕಿಸ್ತಾನದ ಭಾರತದ ಮಾನ ಕಳೆಯಲು ಬಳಸುತ್ತಿದೆ’ ಎಂದು ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಕ್ಷದ ಮೇಲೆ ನಿಯಂತ್ರಣವೇ ಇಲ್ಲವೇ? ಅಥವಾ ಪಹಲ್ಗಾಂ ದಾಳಿ ಬಳಿಕ ತಾವು ಮಾತ್ರ ಭಾರತೀಯರೆಲ್ಲರು ಒಗ್ಗಟ್ಟು ಪ್ರದರ್ಶಿಸಬೇಕೆಂಬ ಔಪಚಾರಿಕ ಹೇಳಿಕೆ ನೀಡಿ ಪಕ್ಷದ ಉಳಿದ ನಾಯಕರು ತಮಗೆ ಬೇಕಾದಂತೆ ಮಾತನಾಡಲು ಅವಕಾಶ ನೀಡಿದ್ದಾರೆಯೇ? ಎಂದೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Mangalasutra row: ರೈಲ್ವೆ ನೇಮಕಾತಿ ಪರೀಕ್ಷೆ, ಮಂಗಳಸೂತ್ರ, ಧಾರ್ಮಿಕ ಚಿಹ್ನೆ ನಿರ್ಬಂಧ ರದ್ದು...

ಭಯೋತ್ಪಾದನಾ ದಾಳಿ ಬಳಿಕ ಅಮೆರಿಕ, ಫ್ರಾನ್ಸ್‌, ಸೌದಿ ಅರೇಬಿಯಾ ಸೇರಿ ಇಡೀ ವಿಶ್ವವೇ ಭಾರತದ ಜತೆಗಿದ್ದರೆ ಕಾಂಗ್ರೆಸ್‌ನ ಕೆಲ ನಾಯಕರು ಮಾತ್ರ ನಾಚಿಕೆಗೇಡಿನ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇವರ ಹೇಳಿಕೆಗಳನ್ನು ಪಾಕಿಸ್ತಾನ ಮತ್ತು ಅಲ್ಲಿನ ಮಾಧ್ಯಮಗಳು ನಮ್ಮ ಮಾನ ಕಳೆಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಸಿದ್ದು, ಸಚಿವ ತಿಮ್ಮಾಪುರ ಹೆಸರು ಪ್ರಸ್ತಾಪಿಸಿ ಆಕ್ರೋಶ

ನವದೆಹಲಿ: ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರ ಹತ್ಯೆ ಕುರಿತು ಕಾಂಗ್ರೆಸ್‌ ನಾಯಕರು ನೀಡಿರುವ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ತಮ್ಮ ಪಕ್ಷದ ನಾಯಕರ ಮೇಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಹಿಡಿತ ಇಲ್ಲವೇ ಎಂದು ಪ್ರಶ್ನಿಸಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾ ಸಿಎಂ ವಿಜಯ್ ವಡೆಟ್ಟಿವಾರ್‌, ತಿಮ್ಮಾಪೂರ್‌ ಸೇರಿದಂತೆ ಕೆಲ ನಾಯಕರು ನೀಡಿರುವ ಹೇಳಿಕೆಗಳು ಪಾಕಿಸ್ತಾನದ ಭಾಷೆಯಲ್ಲಿದೆ. ಇವರ ಮಾತುಗಳನ್ನು ಉಲ್ಲೇಖಿಸಿ ಪಾಕಿಸ್ತಾನ ಭಾರತದ ವಿರುದ್ಧ ದೂಷಣೆ ಮಾಡುತ್ತಿದೆ ಎಂದು ಕಿಡಿಕಾರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..