ಆರೆಸ್ಸೆಸ್‌ಗೆ ‘ನಮಸ್ತೆ ಸದಾ ವತ್ಸಲೇ’ ಮಾತ್ರ ಮುಖ್ಯ : ಖರ್ಗೆ ತಿರುಗೇಟು

Sujatha NR   | Kannada Prabha
Published : Nov 08, 2025, 06:37 AM IST
Mallikarjun Kharge

ಸಾರಾಂಶ

ರಾಷ್ಟ್ರೀಯ ಗೀತೆ ವಂದೇ ಮಾತರಂನ ಮುಖ್ಯ ಚರಣಗಳನ್ನು ಕತ್ತರಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಅಪಮಾನ ಮಾಡಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

 ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂನ ಮುಖ್ಯ ಚರಣಗಳನ್ನು ಕತ್ತರಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಅಪಮಾನ ಮಾಡಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ರಾಷ್ಟ್ರೀಯತೆಯ ಸ್ವಯಂಘೋಷಿತ ರಕ್ಷಕರೆಂದು ಹೇಳಿಕೊಳ್ಳುವ ಆರ್‌ಎಸ್‌ಎಸ್

‘ಇಂದು ರಾಷ್ಟ್ರೀಯತೆಯ ಸ್ವಯಂಘೋಷಿತ ರಕ್ಷಕರೆಂದು ಹೇಳಿಕೊಳ್ಳುವ ಆರ್‌ಎಸ್‌ಎಸ್ ಮತ್ತು ಬಿಜೆಪಿ ತಮ್ಮ ಶಾಖೆಗಳಲ್ಲಿ ಅಥವಾ ಕಚೇರಿಗಳಲ್ಲಿ ವಂದೇ ಮಾತರಂ ಅಥವಾ ನಮ್ಮ ರಾಷ್ಟ್ರಗೀತೆ ಜನ ಗಣ ಮನವನ್ನು ಎಂದಿಗೂ ಹಾಡಿಲ್ಲ. ಬದಲಾಗಿ, ‘ನಮಸ್ತೆ ಸದಾ ವತ್ಸಲೇ’ ಹಾಡುವುದನ್ನು ಮುಂದುವರೆಸಿದ್ದಾರೆ. ಇದು ರಾಷ್ಟ್ರವನ್ನಲ್ಲ, ಅವರ ಸಂಘಟನೆಯನ್ನು ವೈಭವೀಕರಿಸುತ್ತದೆ. 1925ರಲ್ಲಿ ಆರ್‌ಎಸ್‌ಎಸ್ ಸ್ಥಾಪನೆಯಾದಾಗಿನಿಂದ, ವಂದೇ ಮಾತರಂ ಅನ್ನು ಹಾಡಿಲ್ಲ. ಅದರ ಪಠ್ಯಗಳು ಅಥವಾ ಸಾಹಿತ್ಯದಲ್ಲಿ ಒಮ್ಮೆಯೂ ಈ ಹಾಡಿನ ಉಲ್ಲೇಖವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್ ಬ್ರಿಟಿಷರನ್ನು ಬೆಂಬಲಿಸಿತು, 52 ವರ್ಷಗಳ ಕಾಲ ತನ್ನ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಿಲ್ಲ’ ಎಂದು ಕಿಡಿ ಕಾರಿದ್ದಾರೆ.

2 ಚರಣ ಮಾತ್ರ ಅಂಗೀಕರಿಸಿ ಎಂದಿದ್ದೇ ಟ್ಯಾಗೋರ್‌: 

ಕಾಂಗ್ರೆಸ್‌ವಂದೇ ಮಾತರಂ ಅನ್ನು ಬಹುವಾಗಿ ಮೆಚ್ಚುತ್ತಿದ್ದ ರವೀಂದ್ರನಾಥ ಟ್ಯಾಗೋರ್‌ಅವರೇ ಆ ಗೀತೆಯ ಮೊದಲ 2 ಚರಣ ಸ್ವೀಕರಿಸಿ. ಉಳಿದವನ್ನು ಕೈಬಿಡಿ ಎಂದು ಸೂಚಿಸಿದ್ದರು. ಆ ಪ್ರಕಾರ 1937ರಲ್ಲಿ ಅವನ್ನು ಕೈಬಿಡಲಾಗಿತ್ತು. ಇದನ್ನೇ ವಿಭಜಕ ಸಿದ್ಧಾಂತ ಎಂದರೆ ಹೇಗೆ? ಇದು ನಾಚಿಕೆಗೇಡಿತನ. ಮೋದಿ ಈ ಆರೋಪದ ಬಗ್ಗೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. --6 ಚರಣದಲ್ಲಿ 4ಕ್ಕೆ ಕೊಕ್‌ವಂದೇ ಗೀತೆ ಮೊದಲು 6 ಚರಣ ಹೊಂದಿತ್ತು. ದೇವಿಯ ಆರಾಧನೆ ಕುರಿತ ಕೆಲವು ಪದಗಳಿದ್ದ ಕಾರಣ ವಂದೇ ಗೀತೆಗೆ ಮುಸ್ಲಿಂ ಲೀಗ್‌ ವಿರೋಧ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಮೊದಲಿನ 2 ಚರಣ ಹೊರತುಪಡಿಸಿ ಗೀತೆಯ ಉಳಿದ 4 ಚರಣ ಕೈಬಿಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು