ಕಾಂಗ್ರೆಸ್‌ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್‌ ಆಂಟನಿ ಬಿಜೆಪಿಗೆ ಸೇರ್ಪಡೆ

By Santosh Naik  |  First Published Apr 6, 2023, 3:25 PM IST

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.


ನವದೆಹಲಿ (ಏ.6): ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಮ್ಮೆ ಮುಗುಜರದ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅದರೊಂದಿಗೆ ಕೇರಳ ಬಿಜೆಪಿಗೆ ಅತಿದೊಡ್ಡ ಬಲ ಸಿಕ್ಕಂತಾಗಿದೆ. ಕೇರಳ ಕಾಂಗ್ರೆಸ್‌ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್‌ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್‌ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು. ಅದರ ಬೆನ್ನಲ್ಲಿಯೇ ಕಾಂಗ್ರೆಸ್‌ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು. ಇದರಿಂದಾಗಿ ಬೇಸರಗೊಂಡು ಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅನಿಲ್‌ ಆಂಟನಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್‌ ಗೋಯೆಲ್‌ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‌ ಕೂಡ ಹಾಜರಿದ್ದರು. ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿ ಅವರು ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್‌ ಕಿಡಿಕಾರಿದ್ದ ಹಿನ್ನಲೆಯಲ್ಲಿ, ಕಳೆದ ಜನವರಿಯಲ್ಲಿ ಅವರು ಕಾಂಗ್ರೆಸ್‌ ಪಕ್ಷದ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

Tap to resize

Latest Videos

ವಾಕ್‌ ಸ್ವಾತಂತ್ರ್ಯಕ್ಕೆ ಹೋರಾಡುವಂಥ ವ್ಯಕ್ತಿಗಳೇ, ನಾನು ಮಾಡಿದ್ದ ಟ್ವೀಟ್‌ಅನ್ನು ಡಿಲೀಟ್‌ ಮಾಡುವಂತೆ ಒತ್ತಾಯ ಹೇರುವ ಮೂಲಕ ಅಸಹಿಷ್ಣುತೆ ತೋರಿದ್ದರು ಎಂದು ಬರೆದು ಕಾಂಗ್ರೆಸ್‌ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇರಳ ಕಾಂಗ್ರೆಸ್‌ ಪಕ್ಷದಲ್ಲಿನ ನನ್ನೆಲ್ಲಾ ಹುದ್ದೆಗಳಿಗೆ ನಾನು ರಾಜೀನಾಮೆ ನೀಡಿದ್ದೇನೆ. ನನ್ನ ಟ್ವೀಟ್‌ಅನ್ನು ಡಿಲೀಟ್‌ ಮಾಡುವಂತೆ ವಿಪರೀತ ಒತ್ತಡ ಹೇರುವ ಕರೆಗಳು ಬರುತ್ತಿದ್ದವು. ಇವರೆಲ್ಲಾ ವಾಕ್‌ ಸ್ವಾತಂತ್ರ್ಯಕ್ಕೆ ಹೋರಾಟ ಮಾಡುತ್ತಿದ್ದರು ಎನ್ನುವುದಕ್ಕೆ ನಾಚಿಕೆ ಆಗುತ್ತಿದೆ. ಆದರೆ, ನಾನು ಟ್ವೀಟ್‌ ಡಿಲೀಟ್‌ ಮಾಡಲು ನಿರಾಕರಿಸಿದ್ದೆ. ನನ್ನ ರಾಜೀನಾಮೆ ಪತ್ರ ಇಲ್ಲಿದೆ' ಎಂದು ರಾಜೀನಾಮೆ ಪತ್ರದೊಂದಿಗೆ ಅನಿಲ್‌ ಆಂಟನಿ ಟ್ವೀಟ್‌ ಮಾಡಿದ್ದರು.

ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತೊರೆದ ಮಾಜಿ ಕೇಂದ್ರ ಸಚಿವ ಆಂಟನಿ ಪುತ್ರ

ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವು ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಬಗ್ಗೆ ಚಿತ್ರಿಸಿತ್ತು. ಅನಿಲ್ ಅವರು ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದಲ್ಲದೆ., "ಭಾರತ ವಿರೋಧಿ ಪೂರ್ವಾಗ್ರಹ' ಹೊಂದಿರುವ ಮಾಧ್ಯಮ ಎಂದಿದ್ದರು. ಸಾಕ್ಷ್ಯಚಿತ್ರವನ್ನು ವಿರೋಧಿಸಿದ ಅನಿಲ್ ಕೆ ಆಂಟನಿ,ಬಿಬಿಸಿ ಅಭಿಪ್ರಾಯಗಳನ್ನು ಭಾರತೀಯ ಸಂಸ್ಥೆಗಳ ಮೇಲೆ ಇರಿಸುವುದು ದೇಶದ ಸಾರ್ವಭೌಮತ್ವವನ್ನು "ಹಾನಿಮಾಡುತ್ತದೆ" ಎಂದು ಹೇಳಿದ್ದರು.

 

 

click me!