ಜೈಲಿನಿಂದಲೇ ಪರೀಕ್ಷೆ ಪಾಸ್‌ ಮಾಡಿದ್ದ ಹರ್ಯಾಣದ ಮಾಜಿ ಸಿಎಂ ಓಂ ಪ್ರಕಾಶ ಚೌಟಾಲಾ ನಿಧನ

Published : Dec 20, 2024, 01:37 PM IST
ಜೈಲಿನಿಂದಲೇ ಪರೀಕ್ಷೆ ಪಾಸ್‌ ಮಾಡಿದ್ದ ಹರ್ಯಾಣದ ಮಾಜಿ ಸಿಎಂ ಓಂ ಪ್ರಕಾಶ ಚೌಟಾಲಾ ನಿಧನ

ಸಾರಾಂಶ

ಐಎನ್‌ಎಲ್‌ಡಿ ನಾಯಕ, ಹರ್ಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ ಚೌಟಾಲಾ (89) ಗುರುಗ್ರಾಮದಲ್ಲಿ ನಿಧನರಾದರು. ನಾಲ್ಕು ಬಾರಿ ಸಿಎಂ ಆಗಿದ್ದ ಚೌಟಾಲಾ, ಉಪ ಪ್ರಧಾನಿ ದೇವಿಲಾಲ್ ಪುತ್ರ. ಶಿಕ್ಷಕರ ನೇಮಕಾತಿ ಹಗರಣ, ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸಿದ್ದರು. ಜೈಲುವಾಸದಲ್ಲೂ ೧೨ನೇ ತರಗತಿ ಪಾಸಾಗಿದ್ದರು.

ಹರ್ಯಾಣದ ಮಾಜಿ ಮುಖ್ಯಮಂತ್ರಿ, ಐಎನ್‌ಎಲ್‌ಡಿ ನಾಯಕ  ಓಂ ಪ್ರಕಾಶ ಚೌಟಾಲಾ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಗುರುಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಖಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಹರಿಯಾಣದ ಚೌಟಾಲಾದಲ್ಲಿ ಜನಿಸಿದ ಅವರು ಭಾರತದ 6ನೇ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ದೇವಿ ಲಾಲ್ ಅವರ ಪುತ್ರರಾಗಿದ್ದಾರೆ.

ಇಂಡಿಯನ್ ನ್ಯಾಷನಲ್ ಲೋಕ ದಳದ (ಐಎನ್‌ಎಲ್‌ಡಿ) ಮುಖ್ಯಸ್ಥರಾಗಿದ್ದ ಚೌಟಾಲಾ ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ರಾಜಕೀಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.  ನಾಲ್ಕು ಬಾರಿ ಹರಿಯಾಣದ ಮುಖ್ಯಮಂತ್ರಿಯಾಗಿದ್ದರು. ಹರ್ಯಾಣದ ಸಿಂಎಂ ಆಗಿ ಅವರ ಕೊನೆಯ ಅವಧಿ 1999ರಿಂದ 2005 ರವರೆಗೆ ಆಗಿತ್ತು.

ಪ್ರಭಾವಿ ರಾಜಕಾರಣಿಯಾಗುವುದರ ಜೊತೆಗೆ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದರು. ಮುಖ್ಯವಾಗಿ 2000ನೇ ಇಸವಿಯಲ್ಲಿ 3206 ಶಿಕ್ಷಕರನ್ನು ಅಕ್ರಮವಾಗಿ ನೇಮಿಸಿಕೊಂಡ ಆರೋಪ ಸಂಬಂಧ ಒ.ಪಿ.ಚೌಟಾಲಾ, ಅವರ ಪುತ್ರ ಅಜಯ್‌ ಚೌಟಾಲಾ ಮತ್ತು 55 ಜನರನ್ನು ದೋಷಿಗಳೆಂದು ಪರಿಗಣಿಸಿ    2015ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಇಷ್ಟು ಮಾತ್ರವಲ್ಲದೆ ಅಕ್ರಮ ಆಸ್ತಿಯ ಪ್ರಕರಣದಲ್ಲಿ, ದಿಲ್ಲಿ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಚೌಟಾಲಾ ಬಳಿಯಿರುವ 4 ಅಕ್ರಮ ಆಸ್ತಿಗಳನ್ನು ವಶಪಡಿಸಿಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಶಾಲಾ ಶಿಕ್ಷಕಿಯರ ನೇಮಕಾತಿ ವೇಳೆ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ 10 ವರ್ಷಗಳ ಶಿಕ್ಷೆ ಅನುಭವಿಸಿ ಬಂದ ಬಳಿಕ ಮತ್ತೆ 2022ರಲ್ಲಿ ಜೈಲಿಗೆ ಹೋಗುವಂತಾಯ್ತು.  ತಿಹಾರ್ ಜೈಲಿನಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಸಂದರ್ಭದಲ್ಲಿ ತಮ್ಮ 82ನೇ ವಯಸ್ಸಿನಲ್ಲಿ 12ನೇ ತರಗತಿ ಪರೀಕ್ಷೆ ಬರೆದು ಫಸ್ಟ್ ಕ್ಲಾಸ್'ನಲ್ಲಿ ಪಾಸಾಗಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌