
ನವದೆಹಲಿ, (ಅ. 13): ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ.ಮನ್‌ಮೋಹನ್ ಸಿಂಗ್ (Dr. Manmohan Singh) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ (All India Institute Of Medical Science (AIIMS), Delhi) ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸೋಮವಾರವೂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಬಳಿಕ ಚೇತರಿಸಿಕೊಂಡಿದ್ದರು. ಇಂದು (ಅ.13) ಸಂಜೆ ಮತ್ತೆ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದೆ.
ಪ್ರಧಾನಿ ಮೋದಿಗೆ ಮನ್‌ಮೋಹನ್ ಸಿಂಗ್ ಪತ್ರ; ಕೊರೋನಾ ನಿಯಂತ್ರಣಕ್ಕೆ ಹೇಳಿದ್ರು 5 ಸೂತ್ರ!
ಜ್ವರ ಕಾಣಿಸಿಕೊಂಡ ಬಳಿಕ ಮನ್‌ಮೋಹನ್ ಸಿಂಗ್ ಅವವರು ದ್ರವ ರೂಪದ ಆಹಾರವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದರು. ಇದರಿಂದ ಆಯಾಸಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅವರು ಈ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರು ಏಮ್ಸ್ ಆಸ್ಪತ್ರೆಯ ಟ್ರೌಮ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.
ಇನ್ನು ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ ಪ್ರತಿಕ್ರಿಯಿಸಿದ್ದು, ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿಗಳು ಕೇಳಿ ಬರುತ್ತಿವೆ. ಅವರ ಆರೋಗ್ಯ ಸ್ಥಿರವಾಗಿವೆ. ಯಾವುದಾದರೂ ಮಾಹಿತಿ ಇದ್ದರೆ ನಾವು ಹಂಚಿಕೊಳ್ಳುತ್ತೇವೆ. ಮಾಧ್ಯಮದ ಸ್ನೇಹಿತರ ಕಾಳಜಿಗೆ ಧನ್ಯವಾದಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ